ಸಕಲೇಶಪುರ : ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 2054ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಸಬಾ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸಕಲೇಶಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಹಾಸನ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ತೇರಪಂಥ್ ಸಭಾಭವನ ಸಕಲೇಶಪುರ, ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆ ಸಕಲೇಶಪುರ, ಪುರಸಭೆ ಸಕಲೇಶಪುರ, ಪೊಲೀಸ್ ಇಲಾಖೆ ಸಕಲೇಶಪುರ, ಲಯನ್ಸ್ ಸಂಸ್ಥೆ ಸಕಲೇಶಪುರ, ರೋಟರಿ ಸಂಸ್ಥೆ ಸಕಲೇಶಪುರ, ಸ್ಥಳೀಯ ಸಂಘ ಸಂಸ್ಥೆಗಳು, ಕಾರ್ಯನಿರತ ಪತ್ರಕರ್ತರ ಸಂಘ ಸಕಲೇಶಪುರ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸಕಲೇಶಪುರ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು, ನವಜೀವನ ಸಮಿತಿಗಳು ಹಾಗೂ ಊರಿನ ಗಣ್ಯರು ಮತ್ತು ದಾನಿಗಳು ಸಕಲೇಶಪುರ ತಾಲೂಕು ಇವರ ಸಹಕಾರದೊಂದಿಗೆ, 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ಸಕಲೇಶಪುರದ ತೇರಪಂಥ್ ಸಭಾಭವನದಲ್ಲಿ ಸಂಪನ್ನಗೊಂಡಿತು.ಕಾರ್ಯಕ್ರಮದ ಉದ್ಘಾಟನೆಯನ್ನು ವನರಾಜ್ ವಿ.ಸಿ ಆರಕ್ಷಕ ನಿರೀಕ್ಷಕರು ನಗರ ಪೊಲೀಸ್ ಠಾಣೆ ಸಕಲೇಶಪುರ ಇವರು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿದರು.ಡಾll ನವೀನ್ ಚಂದ್ರ ಶೆಟ್ಟಿ ಅಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಹಾಸನ ಜಿಲ್ಲೆ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು.
ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ರಾಜೇಶ್ ಎಂ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ಸಕಲೇಶಪುರ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮವಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಸಮುದಾಯದ ಕಾರ್ಯಕ್ರಮಗಳಾದ ನಮ್ಮೂರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಪೀಠೋಪಕರಣ ಒದಗಣೆ, ಜ್ಞಾನದೀಪ ಕಾರ್ಯಕ್ರಮದ ಮುಖೇನ ಗೌರವ ಶಿಕ್ಷಕರ ಒದಗಣೆ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು.ಕಾರ್ಯಕ್ರಮದ ವೇದಿಕೆಯಲ್ಲಿ ರೇಖಾ ಸುರೇಶ್ ಅಧ್ಯಕ್ಷರು 2054ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಸಕಲೇಶಪುರ, ಬಲ್ಕೀಸ್ ರಾಣಿ ಪುರಸಭಾ ಸದಸ್ಯರು ಯೋಜನಾ ಪ್ರಾಧಿಕಾರ ಸಕಲೇಶಪುರ, ಮುಖೇಶ್ ಪ್ರಾದೇಶಿಕ ಯೋಜನಾಧಿಕಾರಿ ಜನಜಾಗೃತಿ ಪ್ರಾದೇಶಿಕ ವಿಭಾಗ ಮೈಸೂರು, ಗೌರೀಶ್ ವ್ಯವಸ್ಥಾಪಕರು ಕರ್ನಾಟಕ ಬ್ಯಾಂಕ್ ಸಕಲೇಶಪುರ, ಶ್ರೀನಿವಾಸ್ ನಿವೃತ್ತ ಕೃಷಿ ಇಲಾಖೆ ಅಧಿಕಾರಿ ಸಕಲೇಶಪುರ, ನವೀನ್ ಲಾರೆನ್ಸ್ ಡಿಸೋಜ ಉಪಾಧ್ಯಕ್ಷರು 2054ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಸಕಲೇಶಪುರ, ಗಿರೀಶ್ ಮಂಜುನಾಥ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ, ಯೋಗೇಶ್ ಕೋಶಾಧಿಕಾರಿ 2054ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಸಕಲೇಶಪುರ ಇವರುಗಳು ಉಪಸ್ಥಿತರಿದ್ದು ಶುಭವನ್ನು ಹಾರೈಸಿದರು.
ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಫಿಲೋಮಿನಾ ಡಿಸೋಜ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರು ಎಂಟು ದಿನಗಳ ಮದ್ಯವರ್ಜನ ಶಿಬಿರವನ್ನು ನಿರ್ವಹಿಸಲಿದ್ದಾರೆ.ಚಿರಂತ್ ಸಿ.ಎನ್ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಸಬಾ ವಲಯ, ಸೇವಾಪ್ರತಿನಿಧಿಗಳು ಮತ್ತು ಒಕ್ಕೂಟದ ಅಧ್ಯಕ್ಷರು / ಪದಾಧಿಕಾರಿಗಳು ಕಸಬಾ ವಲಯ, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು ಕಸಬಾ ವಲಯ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸಕಲೇಶಪುರ, ನವಜೀವನ ಸಮಿತಿ ಸದಸ್ಯರುಗಳು ಹಾಗೂ ಸಾರ್ವಜನಿಕರು ಸಕಲೇಶಪುರ ತಾಲೂಕು ಇವರುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.0ಕಾರ್ಯಕ್ರಮವನ್ನು ರಾಜೇಶ್ ಎಂ. ಯೋಜನಾಧಿಕಾರಿ ಸ್ವಾಗತಿಸಿ, ಮೋಹಿನಿ ಮೇಲ್ವಿಚಾರಕರು ನಿರೂಪಿಸಿ, ಗಿರೀಶ್ ಮಂಜುನಾಥ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಇವರು ವಂದಿಸಿದರು.
