ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ ನಡೆದ 225 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿ ಕೊಟ್ಟಿರುತ್ತಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಮಂಜುನಾಥ್ ಶೆಟ್ಟಿ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ, ಶ್ರೀ ಸುರೇಶ್ ಶೆಟ್ಟಿ ಅಧ್ಯಕ್ಷರು ತಾಲೂಕು ಭಜನಾ ಪರಿಷತ್ತು ತೀರ್ಥಹಳ್ಳಿ ಉಪಸ್ಥಿತರಿದ್ದರು. 73 ಶಿಬಿರಾರ್ಥಿಗಳು ನವಜೀವನಕ್ಕೆ ಪಾದಾರ್ಪಣೆ ಮಾಡಿದರು.
