ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌಧದಲ್ಲಿ ನಡೆದ 229 ನೇ ವಿಶೇಷ ಮದ್ಯವರ್ಜನ ಶಿಬಿರದ ಶಿಬಿರಾರ್ಥಿಗಳಿಗೆ ಪೂಜ್ಯ ಖಾವಂದರು ಆಶೀರ್ವಾದ ಮತ್ತು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು, ಯೋಜನಾಧಿಕಾರಿಯವರಾದ ಶ್ರೀ ಮಾಧವ, ಶಿಬಿರಾಧಿಕಾರಿ, ಆರೋಗ್ಯ ಕಾರ್ಯಕರ್ತರು, ನವಜೀವನ ಸಮಿತಿ ಸದಸ್ಯರು, ಶಿಬಿರಾರ್ಥಿಗಳು ಹಾಗೂ ಅವರ ಕುಟುಂಬದವರು ಉಪಸ್ಥಿತರಿದ್ದರು.
