230 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌಧದಲ್ಲಿ ನಡೆದ 230 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರಿ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಬಿ ಸಿ ವಿಭಾಗದ ಮಾನ್ಯ ನಿರ್ದೇಶಕರಾದ ಶ್ರೀ ವಸಂತ, ಯೋಜನಾಧಿಕಾರಿಯವರಾದ ಶ್ರೀ ಮಾಧವ್ ರವರು, ಶಿಬಿರಾಧಿಕಾರಿ, ಆರೋಗ್ಯ ಕಾರ್ಯಕರ್ತರು, ನವಜೀವನ ಸಮಿತಿ ಸದಸ್ಯರು, ಶಿಬಿರಾರ್ಥಿಗಳು ಮತ್ತು ಅವರ ಕುಟುಂಬದವರು ಉಪಸ್ಥಿತರಿದ್ದರು.