ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ 234 ನೇ ವಿಶೇಷ ಮದ್ಯವರ್ಜನ ಶಿಬಿರ(1874ನೇ ರಾಜ್ಯ ಮಟ್ಟದ ಶಿಬಿರ) ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿಬಿರದ ವೈದ್ಯಾಧಿಕಾರಿ ಹಾಗೂ ಆರ್ಯಭಟ ಪ್ರಶಸ್ತಿ ಪುರಸ್ಕೃತ ವೈದ್ಯರಾದ ಡಾ. ಶ್ರೀ ಮೋಹನದಾಸ ಗೌಡ ಇವರು ನೆರವೇರಿಸಿದರು. ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರು ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಹಾಗೂ ಕಾರ್ಯದರ್ಶಿಗಳು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇವರು ಜನಜಾಗೃತಿ ವೇದಿಕೆಯ ಹುಟ್ಟು, ಬೆಳವಣಿಗೆ, ನಡೆದು ಬಂದ ಹಾದಿ ಮತ್ತು ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಮತ್ತು ಶಿಬಿರಾರ್ಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಮಾಧವ ಗೌಡ ಆಡಳಿತಾತ್ಮಕ ಯೋಜನಾಧಿಕಾರಿ ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಶ್ರೀ ಕಿಶೋರ್ ಪ್ರಬಂಧಕರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ಶಿಬಿರಾಧಿಕಾರಿ ಶ್ರೀ ನಂದಕುಮಾರ್ ಪಿ. ಪಿ., ಆರೋಗ್ಯ ಸಹಾಯಕಿ ಶ್ರೀಮತಿ ನೇತ್ರಾವತಿ ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ ವಿಶೇಷ ಶಿಬಿರಾರ್ಥಿಗಳು ಮತ್ತು ಅವರ ಕುಟುಂಬದ ಸದಸ್ಯರುಗಳು ಭಾಗವಹಿಸಿದ್ದರು. ನವಜೀವನ ಸಮಿತಿಯ ಸದಸ್ಯರುಗಳು ತಮ್ಮ ವೈಯಕ್ತಿಕ ಪರಿಚಯದೊಂದಿಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಂಶೋಧನಾ ಕೇಂದ್ರದ ಸಿಬ್ಬಂದಿಗಳು, ಸ್ವಯಂ ಸೇವಕರು ಮತ್ತು ನವಜೀವನ ಸಮಿತಿ ಸದಸ್ಯರುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.