ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ ನಡೆಯುತ್ತಿರುವ 234 ನೇ ವಿಶೇಷ ಮದ್ಯವರ್ಜನ ಶಿಬಿರದ (1874 ನೇ ರಾಜ್ಯ ಮಟ್ಟದ ಶಿಬಿರ) 6 ನೇ ದಿನದಂದು ಪರಮಪೂಜ್ಯ ಖಾವಂದರು ಆಗಮಿಸಿ ಚಿಕಿತ್ಸೆ ಪಡೆಯುತ್ತಿರುವ 66 ಮಂದಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಪ್ರಾದೇಶಿಕ ನಿರ್ದೇಶಕರು ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಶ್ರೀ ಮಾಧವ ಗೌಡ ಯೋಜನಾಧಿಕಾರಿ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ, ಶ್ರೀ ನಂದಕುಮಾರ್ ಪಿ. ಪಿ. ಶಿಬಿರಾಧಿಕಾರಿ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಜಾಗೃತಿ ಸೌಧದ ಪ್ರಬಂಧಕರಾದ ಶ್ರೀ ಕಿಶೋರ್ ಇವರುಗಳು ಉಪಸ್ಥಿತರಿದ್ದರು.