237 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆಯಲ್ಲಿ ನಡೆದ 237 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಗೌರವಾನ್ವಿತ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಅನಿಲ್ ಕುಮಾರ್ ಎಸ್. ಎಸ್. ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶಿಬಿರದಲ್ಲಿ ಪಾನಮುಕ್ತರಾಗಿ ನವಜೀವನ ನಡೆಸಲಿರುವ 75 ಶಿಬಿರಾರ್ಥಿಗಳಿಗೆ ಹಾಗೂ ಅವರ ಮನೆಯವರಿಗೆ ನವಜೀವನ ನಡೆಸುವ ಕುರಿತು ಮಾಹಿತಿ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು, ಜನಜಾಗೃತಿ ವೇದಿಕೆ ಆಡಳಿತಾತ್ಮಕ ಯೋಜನಾಧಿಕಾರಿಗಳು, ಶಿಬಿರಾಧಿಕಾರಿಗಳು, ಆರೋಗ್ಯ ಸಹಾಯಕರು ಮತ್ತು ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.