ಶ್ರೀ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ ನಡೆದ 239 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಮತ್ತು ಆಡಳಿತಾತ್ಮಕ ಯೋಜನಾಧಿಕಾರಿಗಳಾದ ಶ್ರೀ ಮಾಧವ್ ಗೌಡ ರವರು ನಡೆಸಿಕೊಟ್ಟರು. ವೇದಿಕೆಯಲ್ಲಿ ಆಪ್ತ ಸಮಲೋಚಕರಾದ ಶ್ರೀ ಮಧು ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ, ಆರೋಗ್ಯ ಸಹಾಯಕರು ಮತ್ತು ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು. 63 ಶಿಬಿರಾರ್ಥಿಗಳು ನವಜೀವನಕ್ಕೆ ಪಾದಾರ್ಪಣೆ ಮಾಡಿದರು.
