ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ 265ನೇ ವಿಶೇಷ ಮದ್ಯವರ್ಜನ ಶಿಬಿರ ( 2044 ನೇ ರಾಜ್ಯ ಮಟ್ಟದ ಶಿಬಿರದಪ್ರಥಮ ದಿನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಗಳು ಮತ್ತು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಅವರು ಪ್ರಾಸ್ತಾವಿಕದೊಂದಿಗೆ ಎಲ್ಲರನ್ನು ಸ್ವಾಗತಿಸಿದರು.ಮತ್ತು ವೇದಿಕೆಯಲ್ಲಿರುವ ಎಲ್ಲಾ ಗಣ್ಯರು 265ನೇ ವಿಶೇಷ ಮದ್ಯ ವರ್ಜನ ಶಿಬಿರವನ್ನು ಉದ್ಘಾಟಿಸಿದರು.
