ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ ಸಮಾರೋಪ ಮತ್ತು ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಇದರ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮಾಸಾಚರಣೆಯ ಸಮಾರೋಪ ಸಮಾರಂಭ ಮತ್ತು ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ರಾಮಕುಂಜದ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗೀರಥಿ ರವರು ಉದ್ಘಾಟಿಸಿ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಗಳು ಮತ್ತು ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು. ಸಭಾಧ್ಯಕ್ಷತೆಯನ್ನು ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಮಹೇಶ್ ಕೆ. ಸವಣೂರು ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಶೆಟ್ಟಿ, ರಾಮಕುಂಜ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ, ಮುಖ್ಯೋಪಾಧ್ಯಾರಾದ ಶ್ರೀ ಸತೀಶ್ ಭಟ್, ರಾಮಕುಂಜ ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜೇತ, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ಶ್ರೀ ಜಯಾನಂದ ಬಂಟ್ರಿಯಾಳ್, ಶ್ರೀ ನೋಣಯ್ಯ ಪೂಜಾರಿ, ಶ್ರೀ ಶೇಖರ್ ಶೆಟ್ಟಿ, ಗೋಳಿತೊಟ್ಟು ವಲಯ ಒಕ್ಕೂಟದ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಅಲೇಕಿ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಾಮಕುಂಜ ಪದವಿಪೂರ್ವ ಕಾಲೇಜಿನ 720 ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.