ಕೊಪ್ಪಳ ಪ್ರಾದೇಶಿಕ ವಿಭಾಗದ ಬಳ್ಳಾರಿ ಜಿಲ್ಲೆಯ ಬಳ್ಳಾರಿ ತಾಲೂಕಿನ ಚಳ್ಳ ಗುರುಕಿಯಲ್ಲಿ 1844 ನೇ ಮದ್ಯವರ್ಜನ ಶಿಬಿರದ ಕುಟುಂಬದ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪ್ರಾದೇಶಿಕ ನಿರ್ದೇಶಕರು ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ರಾಜಣ್ಣ ಕೊರವಿ, ಮಾಜಿ ಅಧ್ಯಕ್ಷರು ಶ್ರೀ ನಟರಾಜ್ ಬಾದಾಮಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಯರ್ನ್ನಣ್ಣ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ವಿರೂಪಾಕ್ಷ, ಜನಜಾಗೃತಿ ವೇದಿಕೆ ಸದಸ್ಯರಾದ ರೂಪಶ್ರೀ, ಯೋಜನಾಧಿಕಾರಿ ಶ್ರೀ ವೆಂಕಟೇಶ ಪಟಗಾರ್, ಸರ್ವ ಸದಸ್ಯರು, ಆರೋಗ್ಯ ಕಾರ್ಯಕರ್ತರು, ಶಿಬಿರಾಧಿಕಾರಿ, ಶಿಬಿರಾರ್ಥಿಗಳು ಹಾಗೂ ಅವರ ಕುಂಬದವರು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
