ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲಾ ಜನಜಾಗೃತಿ ವೇದಿಕೆ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀಕಾಂತ್ ಸಂದಿಮನಿ ಉಪಾಧ್ಯಕ್ಷರಾದ ಶ್ರೀ ವೆಂಕಪ್ಪ ಮುಳ್ಳೂರ ಕಾರ್ಯದರ್ಶಿ ಶ್ರೀ ಚನ್ನಕೇಶವ ಅವರ ಉಪಸ್ಥಿತಿಯಲ್ಲಿ ಸಭೆ ನಡೆಸಲಾಯಿತು.2025/2026ಆರ್ಥಿಕ ವರ್ಷದ ಸಾಧನೆಯ ವಿಮರ್ಶೆ,ಸಮಗ್ರ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ತಾಲೂಕುವಾರು ವರದಿ ಮಂಡನೆ ನವಜೀವನ ಸಮಿತಿ ಸಭೆ & ನವ ಜೀವನ ಸಮಿತಿಯ ಪ್ರಗತಿಯ ಅವಲೋಕನ,ನವ ಜೀವನೋತ್ಸವ ಕಾರ್ಯಕ್ರಮದ ಬಗ್ಗೆ,ಜಿಲ್ಲಾ ಜನಜಾಗೃತಿ ವೇದಿಕೆಯ ಲೆಕ್ಕಾಚಾರ & ಆಂತರಿಕ ಲೆಕ್ಕ ಪರಿಶೋಧನೆಯ ಬಗ್ಗೆ 25/2026ಆರ್ಥಿಕ ವರ್ಷದ ಮದ್ಯ ವರ್ಜನ ಶಿಬಿರದ ಕಾರ್ಯಕ್ರಮ ನಾಲ್ಕು ಶಿಬಿರದ ಕುರಿತು
ಸ್ವಸ್ಥ ಸಂಕಲ್ಪ ಕಾರ್ಯಕ್ರಮದ ಕುರಿತು ಅಕ್ಟೋಬರ್ 2 ಗಾಂಧಿ ಜಯಂತಿ ಕಾರ್ಯಕ್ರಮದ ಕುರಿತು ಎಲ್ಲಾ ಸದಸ್ಯರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು ಬಾಗಲಕೋಟೆ ಜಿಲ್ಲೆಯಲ್ಲಿ ಮಾಡಲು ತೀರ್ಮಾನಿಸಲಾಯಿತು ಜನಜಾಗೃತಿ ಕಾರ್ಯಕ್ರಮದ ಬಲವರ್ಧನೆ ಮತ್ತು ಸ್ವಸ್ಥ ಸಂಕಲ್ಪ ಕಾರ್ಯಕ್ರಮಗಳು ಗಾಂಧಿ ಜಯಂತಿ ಕಾರ್ಯಕ್ರಮದ ಕುರಿತು ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ,ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಹಾಗೂ ಕ್ಷೇತ್ರ ಯೋಜನಾಧಿಕಾರಿಗಳು, ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
