ಕೊಪ್ಪಳ ಪ್ರಾದೇಶಿಕ ವಿಭಾಗದ ರಾಯಚೂರು ಜಿಲ್ಲಾ ಜನಜಾಗೃತಿ ವೇದಿಕೆ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಎಂ ಅಮರೇಶ್, ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ಶ್ರೀ.ಜೆ ಚಂದ್ರಶೇಖರ್, ಉಪಾಧ್ಯಕ್ಷರಾದ ಶ್ರೀಮತಿ ತೋಟಮ್ಮ ಕಾರ್ಯದರ್ಶಿ ಶ್ರೀ ಮೋಹನ್ ನಾಯ್ಕ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆಸಲಾಯಿತು.
2025/2026ಆರ್ಥಿಕ ವರ್ಷದ ಸಾಧನೆಯ ವಿಮರ್ಶೆ,ಸಮಗ್ರ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ತಾಲೂಕುವಾರು ವರದಿ ಮಂಡನೆ,ನವಜೀವನ ಸಮಿತಿ ಸಭೆ & ನವ ಜೀವನ ಸಮಿತಿಯ ಪ್ರಗತಿಯ ಅವಲೋಕನ,ನವ ಜೀವನೋತ್ಸವ ಕಾರ್ಯಕ್ರಮದ ಬಗ್ಗೆ,ಜಿಲ್ಲಾ ಜನಜಾಗೃತಿ ವೇದಿಕೆಯ ಲೆಕ್ಕಾಚಾರ & ಆಂತರಿಕ ಲೆಕ್ಕ ಪರಿಶೋಧನೆಯ ಬಗ್ಗೆ,2025/2026ಆರ್ಥಿಕ ವರ್ಷದ ಮದ್ಯ ವರ್ಜನ ಶಿಬಿರದ ಕಾರ್ಯಕ್ರಮ 3 ಶಿಬಿರದ ಕುರಿತು,ಸ್ವಸ್ಥ ಸಂಕಲ್ಪ ಕಾರ್ಯಕ್ರಮದ ಕುರಿತು,ಅಕ್ಟೋಬರ್ 2 ಗಾಂಧಿ ಜಯಂತಿ ಕಾರ್ಯಕ್ರಮದ ಕುರಿತು ಎಲ್ಲಾ ಸದಸ್ಯರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.ರಾಯಚೂರು ಜಿಲ್ಲೆಯಲ್ಲಿ ಮಾಡಲು ತೀರ್ಮಾನಿಸಲಾಯಿತು
ಜನಜಾಗೃತಿ ಕಾರ್ಯಕ್ರಮದ ಬಲವರ್ಧನೆ ಮತ್ತು ಸ್ವಸ್ಥ ಸಂಕಲ್ಪ ಕಾರ್ಯಕ್ರಮಗಳು ಗಾಂಧಿ ಜಯಂತಿ ಕಾರ್ಯಕ್ರಮದ ಕುರಿತು ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ,ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಹಾಗೂ ಕ್ಷೇತ್ರ ಯೋಜನಾಧಿಕಾರಿಗಳು, ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
