ತರೀಕೆರೆ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1991ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕುಡ್ಲೂರು ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ತರೀಕೆರೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಮಗಳೂರು ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ, ಪೊಲೀಸ್ ಇಲಾಖೆ ಅಜ್ಜಂಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಡ್ಲೂರು, ಶ್ರೀ ಬೊಮ್ಮಲಿಂಗೇಶ್ವರ ಸಮುದಾಯ ಭವನ ಕೊರಟಿಕೆರೆ, ಗ್ರಾಮ ಪಂಚಾಯಿತಿ ಕೊರಟಿಕೆರೆ, ಲಯನ್ಸ್ ಕ್ಲಬ್ ಅಜ್ಜಂಪುರ, ಭೂಮಿಕ ಎಲೆಕ್ಟ್ರಿಕಲ್ಸ್ ಅಜ್ಜಂಪುರ, ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಸಮಿತಿ ಕೊರಟಿಕೆರೆ, ಸ್ಥಳೀಯ ಸಂಘ ಸಂಸ್ಥೆಗಳು, ಊರಿನ ಗಣ್ಯರು, ಉದಾರ ದಾನಿಗಳು, ಕುಡ್ಲೂರು ವಲಯದ ಎಲ್ಲಾ ಗ್ರಾಮ ಪಂಚಾಯಿತಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಮತ್ತು ತರೀಕೆರೆ ತಾಲೂಕಿನ ನವಜೀವನ ಸಮಿತಿಗಳು ಇವರ ಸಹಕಾರದೊಂದಿಗೆ 1991ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಕೊರಟಿಕೆರೆ ಶ್ರೀ ಬೊಮ್ಮಲಿಂಗೇಶ್ವರ ಸಮುದಾಯ ಭವನದಲ್ಲಿ ಸಂಪನ್ನಗೊಂಡಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಜ್ಜಂಪುರ ತಾಲೂಕು ದಂಡಾಧಿಕಾರಿಗಳಾದ ಶ್ರೀ ವಿನಾಯಕ್ ಸಾಗರ್ ಇವರು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿದರು.ಶ್ರೀ ಬೊಮ್ಮಲಿಂಗಪ್ಪ ಗೌರವಾಧ್ಯಕ್ಷರು 1991ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕುಡ್ಲೂರು ವಲಯ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು.ಶ್ರೀ ನಾಗರಾಜ್ ಕುಲಾಲ್ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಚಿತ್ರದುರ್ಗ ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಕುಸುಮಾಧರ್ ಕೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ತರೀಕೆರೆ ತಾಲೂಕು ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮವಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಸಮುದಾಯದ ಕಾರ್ಯಕ್ರಮಗಳಾದ ನಮ್ಮೂರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಪೀಠೋಪಕರಣ ಒದಗಣೆ, ಜ್ಞಾನದೀಪ ಕಾರ್ಯಕ್ರಮದ ಮುಖೇನ ಗೌರವ ಶಿಕ್ಷಕರ ಒದಗಣೆ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಕೆ.ಬಿ ಮಲ್ಲಪ್ಪ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಚಿಕ್ಕಮಗಳೂರು, ಶ್ರೀ ಅಸ್ಲಾಂ ಖಾನ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಚಿಕ್ಕಮಗಳೂರು, ಶ್ರೀ ಟಿ.ಆರ್ ಶ್ರೀಧರ್ ಸದಸ್ಯರು ಜಿಲ್ಲಾ ಜನಜಾಗತಿ ವೇದಿಕೆ ಚಿಕ್ಕಮಗಳೂರು, ಶ್ರೀ ಚಂದ್ರಶೇಖರ್ ಗ್ರಾಮದ ಗಣ್ಯರು, ಶ್ರೀಮತಿ ರಾಧಾ ಮಾಜಿ ಸದಸ್ಯರು ಜಿಲ್ಲಾ ಪಂಚಾಯಿತಿ ಚಿಕ್ಕಮಗಳೂರು, ಶ್ರೀಮತಿ ಮಾಲತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೊರಟಿಕೆರೆ, ಶ್ರೀಮತಿ ಮಹೇಶ್ವರಮ್ಮ ಉಪಾಧ್ಯಕ್ಷರು ಗ್ರಾಮ ಪಂಚಾಯಿತಿ ಕುಡ್ಲೂರು, ಶ್ರೀಮತಿ ತನುಜಾ ಮಾಜಿ ಅಧ್ಯಕ್ಷರು ಗ್ರಾಮ ಪಂಚಾಯತಿ ಕುಡ್ಲೂರು ಇವರುಗಳು ಉಪಸ್ಥಿತರಿದ್ದು‌ ಶುಭವನ್ನು ಹಾರೈಸಿದರು.
ಶ್ರೀ ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರು ಎಂಟು ದಿನಗಳ ಮದ್ಯವರ್ಜನ ಶಿಬಿರವನ್ನು ನಿರ್ವಹಿಸಲಿದ್ದಾರೆ.ಶ್ರೀ ಮಂಜುನಾಥ್ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕುಡ್ಲೂರು ವಲಯ, ಸೇವಾಪ್ರತಿನಿಧಿಗಳು ಕುಡ್ಲೂರು ವಲಯ, ಒಕ್ಕೂಟದ ಅಧ್ಯಕ್ಷರು / ಪದಾಧಿಕಾರಿಗಳು ಕುಡ್ಲೂರು ವಲಯ, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು ಕುಡ್ಲೂರು ವಲಯ, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
ಕಾರ್ಯಕ್ರಮವನ್ನು ಸೇವಾಪ್ರತಿನಿಧಿ ಶಶಿಕಲಾ ಪ್ರಾರ್ಥಿಸಿ, ಶ್ರೀ ಮಂಜುನಾಥ್ ಮೇಲ್ವಿಚಾರಕರು ನಿರೂಪಿಸಿ, ಶ್ರೀ ಕುಸುಮಾಧರ್ ಕೆ. ಯೋಜನಾಧಿಕಾರಿ ಸ್ವಾಗತಿಸಿ, ಸೇವಾಪ್ರತಿನಿಧಿ ಸುರೇಖಾ ವಂದಿಸಿದರು.