ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ 260ನೇ ವಿಶೇಷ ಮದ್ಯವರ್ಜನ ಶಿಬಿರ ( 2015 ನೇ ರಾಜ್ಯ ಮಟ್ಟದ ಶಿಬಿರದ5ನೇ ದಿನದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಗೌರವಾನ್ವಿತ ಅನಿಲ್ ಕುಮಾರ್ ಎಸ್ ಎಸ್ ಸರ್ ರವರು 47 ಜನ ಶಿಬಿರಾರ್ಥಿ ಬಂಧುಗಳಿಗೆ ಜೀವನದ ಮೌಲ್ಯವನ್ನು ಹೆಚ್ಚಿಸುವಲ್ಲಿ ಕೈಗೊಳ್ಳಬೇಕಾದ ವಿಧಾನಗಳ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.
