ಭಟ್ಕಳ : ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಸ್ವಸ್ಥ ಸಮಾಜ ನಿರ್ಮಾಣ ಮಾಡುವ ಕಾರ್ಯವನ್ನು ಪರಮಪೂಜ್ಯ ಖಾವಂದರು 4 ದಶಕಗಳಿಂದ ನಡೆಸುತ್ತಾ ಬಂದಿದ್ದಾರೆ, ಅವರ ಮಾರ್ಗದರ್ಶನದಲ್ಲಿ ನಡೆಯುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆಯ ಜನರ ಅಭಿವೃದ್ಧಿಗೆ ತನ್ನದೇ ಆದ ಪಾತ್ರವನ್ನು ನೀಡಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಭಟ್ಕಳ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮುರ್ಡೇಶ್ವರ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಡೆದ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಹಾಗೂ ವಿವಿಧ ಅನುದಾನಗಳ ವಿತರಣಾ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿ ವಹಿಸಿದಂತಹ ಶ್ರೀ ಮಂಕಾಳ S ವೈದ್ಯ, ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹರ್ಷ ವ್ಯಕ್ತಪಡಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮದ್ಯವರ್ಜನ ಶಿಬಿರಕ್ಕೆ ಸೇರಿ ಹೊಸ ಜೀವನಕ್ಕೆ ಕಾಲಿಟ್ಟಂತಹ ಶಿಬಿರಾರ್ಥಿಗಳು ವ್ಯಸನಮುಕ್ತರಾಗಲು ಪಂಚೇಂದ್ರಿಯಗಳನ್ನು ನಿಗ್ರಹಿಸಿ, ದೃಢಸಂಕಲ್ಪದಿಂದ ಜಾಗರೂಕರರಾಗಬೇಕೆಂದರು ಮತ್ತು ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ಸ್ವಸಹಾಯ ಸಂಘದ ಸದಸ್ಯರು ಹಾಗೂ ಧರ್ಮಸ್ಥಳದ ಭಕ್ತರಿಗೆ ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಐದನೇ ವಾರ್ಷಿಕೋತ್ಸವದ ಅಂಗವಾಗಿ ಶೌರ್ಯ ಸ್ವಯಂಸೇವಕರಿಗೆ ಬ್ಯಾಗ್ ವಿತರಣೆ ಮಾಡಲಾಯಿತು.ಭಟ್ಕಳ ತಾಲೂಕಿನಲ್ಲಿ ಪ್ರಸ್ತುತ ವರ್ಷ 1001 ಸ್ವಸಹಾಯ ಸಂಘದ ಸದಸ್ಯರ ಸೇರ್ಪಡೆ ಹಿನ್ನೆಲೆಯಲ್ಲಿ ಸದಸ್ಯರಿಗೆ ಹಿಡುವಳಿ ಯೋಜನೆಯ ಕೈಪಿಡಿ ಪುಸ್ತಕ ನೀಡಲಾಯಿತು.ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುವಂತಹ ವಿವಿಧ ಅನುದಾನದ ಕಾರ್ಯಕ್ರಮಗಳಾದ ಅಶಕ್ತರಿಗೆ ಮಾಸಾಶನ ಮಂಜೂರಾತಿ ಪತ್ರ ಹಾಗೂ ವೀಲ್ ಚೇರ್ ವಿತರಣೆ ಮಾಡಿದರು.ಕಾರ್ಯಕ್ರಮದಲ್ಲಿ 2016ನೇ ಮದ್ಯವರ್ಜನ ಶಿಬಿರದ ಗೌರವಾಧ್ಯಕ್ಷರಾದ ಶ್ರೀ ಚಂದ್ರಶೇಖರ ಜಿನದತ್ತ ಗೌಡ ರವರು ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳಾಡಿದರು.ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಆನಂದ ಸುವರ್ಣರವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು.ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಕುಟುಂಬ ದಿನ ಕಾರ್ಯಕ್ರಮವನ್ನು ನೆರವೇರಿಸಿದರು.ವೇದಿಕೆಯಲ್ಲಿ ಶ್ರೀ ನಟರಾಜ ಬಾದಾಮಿ ರಾಜ್ಯ ಸಂಘಟನಾ ಅಧ್ಯಕ್ಷರು ಜನಜಾಗೃತಿ ವೇದಿಕೆ ಬೆಳ್ತಂಗಡಿ. ಶ್ರೀ ಸತೀಶ್ ರತ್ನಾಕರ್ ಶೇಟ್ ಅಧ್ಯಕ್ಷರು ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಮುರುಡೇಶ್ವರ. ಶ್ರೀ ನವೀನ್ ಕುಮಾರ್ PSI ಪೋಲಿಸ್ ಠಾಣೆ ಮುರ್ಡೇಶ್ವರ. ಶ್ರೀ ಇನಾಯತುಲ್ಲ ಊರಿನ ಮುಖಂಡರು.ಶ್ರೀ ಕೃಷ್ಣ ಬೈರಾ ನಾಯ್ಕ ಅಧ್ಯಕ್ಷರು ಗ್ರಾ ಪಂ ಬೈಲೂರು. ಶ್ರೀ ರಾಜು ಎಂ ನಾಯ್ಕ ಮಂಕಿ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಉತ್ತರ ಕನ್ನಡ ಇವರು ಉಪಸ್ಥರಿದ್ದರು.101 ಜನ ಶಿಬಿರಾರ್ಥಿಗಳು ಮದ್ಯಮುಕ್ತರಾಗಿ ಹೊಸ ಜೀವನಕ್ಕೆ ಕಾಲಿಟ್ಟರು.ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಶ್ರೀ ಮಹೇಶ್ ಎಂ ಡಿ ಸ್ವಾಗತಿಸಿ, ಜನಜಾಗೃತಿ ಯೋಜನಾಧಿಕಾರಿ ಶ್ರೀ ಗಣೇಶ ಆಚಾರ್ಯ ನಿರೂಪಿಸಿ, ಶ್ರೀಮತಿ ಲತಾ ಬಂಗೇರ ವಂದಿಸಿದರು.
