ಚಾಮರಾಜನಗರ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಕೊನೆಯ ತ್ರೈಮಾಸಿಕ ಸಭೆ

Janajagurthi Vedike Uncategorized

ಚಾಮರಾಜನಗರ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಕೊನೆಯ ತ್ರೈಮಾಸಿಕದ ಸಭೆಯನ್ನು ಸಂತೆಮಾರಹಳ್ಳಿಯಲ್ಲಿ ನಿರ್ಮಾಣಗೊಂಡ ಚಾಮರಾಜನಗರ ಜಿಲ್ಲೆಯ ಜಿಲ್ಲಾ ಕಛೇರಿಯ ನೂತನ ಕಟ್ಟಡದ ಸಭಾಭವನದಲ್ಲಿ ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಪ್ರಸಾದ್ ಹೂರದಹಳ್ಳಿಯವರು ವಹಿಸಿದ್ದು, ಮೈಸೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ಶ್ರೀ ಜಯಂತ್ ಪೂಜಾರಿ ಸರ್ ರವರು, ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ರವಿಶಂಕರ್ ರವರು, ಉಪಾಧ್ಯಕ್ಷರು, ಸ್ಥಾಪಕಾಧ್ಯಕ್ಷರು, ಬೆಂಗಳೂರಿನ ಕ್ಷೇಮವನ ಸಂಸ್ಥೆಯ ವೈದ್ಯಾಧಿಕಾರಿಗಳಾದ ಮಾನ್ಯ ಶ್ರೀ ನರೇಂದ್ರರವರು,ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಸರ್ ರವರು ಹಾಗೂ ಆರು ತಾಲೂಕುಗಳ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು, ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಯವರು, ಜಿಲ್ಲಾ ಪ್ರಬಂಧಕರು ಭಾಗವಹಿಸಿದ್ದರು.