ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 2049ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಜ್ಜಂಪುರ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಅಜ್ಜಂಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಮಗಳೂರು ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ, ತರಳಬಾಳು ಸಮುದಾಯ ಭವನ ಸಮಿತಿ (ರಿ.) ಅಜ್ಜಂಪುರ, ಪೊಲೀಸ್ ಇಲಾಖೆ ಅಜ್ಜಂಪುರ, ಸಮುದಾಯ ಆರೋಗ್ಯ ಕೇಂದ್ರ ಅಜ್ಜಂಪುರ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಗೆಳೆಯರ ಬಳಗ ರಂಗತಂಡ ಅಜ್ಜಂಪುರ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ಅಜ್ಜಂಪುರ, ಲಯನ್ಸ್ ಕ್ಲಬ್ / ಹೊಯ್ಸಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಅಜ್ಜಂಪುರ, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಾಧ್ಯಮ ಮಿತ್ರರು ಅಜ್ಜಂಪುರ, ಪ್ರಗತಿಬಂಧು ಜ್ಞಾನವಿಕಾಸ ಸ್ವ-ಸಹಾಯ ಸಂಘಗಳ ಒಕ್ಕೂಟ ಅಜ್ಜಂಪುರ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳು, ಊರಿನ ಗಣ್ಯರು ಹಾಗೂ ದಾನಿಗಳ ಸಹಕಾರದೊಂದಿಗೆ 2049ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ಅಜ್ಜಂಪುರ ತರಳಬಾಳು ಸಮುದಾಯ ಭವನದಲ್ಲಿ ಸಂಪನ್ನಗೊಂಡಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವೇದಿಕೆಯಲ್ಲಿದ್ದ ಅತಿಥಿಗಳು ನೆರವೇರಿಸಿದರು.ಕೇಶವಮೂರ್ತಿ ಅಧ್ಯಕ್ಷರು 2049ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಜ್ಜಂಪುರ ವಲಯ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು.ಶ್ರೀ ನಾಗರಾಜ್ ಕುಲಾಲ್ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಚಿತ್ರದುರ್ಗ ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಸದಾನಂದ ಬಂಗೇರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ಚಿಕ್ಕಮಗಳೂರು ಜಿಲ್ಲೆ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮವಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಸಮುದಾಯದ ಕಾರ್ಯಕ್ರಮಗಳಾದ ನಮ್ಮೂರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಪೀಠೋಪಕರಣ ಒದಗಣೆ, ಜ್ಞಾನದೀಪ ಕಾರ್ಯಕ್ರಮದ ಮುಖೇನ ಗೌರವ ಶಿಕ್ಷಕರ ಒದಗಣೆ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಎ.ಸಿ ಚಂದ್ರಪ್ಪ ಅಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಮಗಳೂರು ಜಿಲ್ಲೆ, ಶಿವಮೂರ್ತಿ ಅಧ್ಯಕ್ಷರು ಹಿರಿಯ ನಾಗರೀಕ ವೇದಿಕೆ ಅಜ್ಜಂಪುರ, ಕೃಷ್ಣ ನಾಯ್ಕ್ ವೃತ್ತ ನಿರೀಕ್ಷಕರು ಪೊಲೀಸ್ ಠಾಣೆ ಅಜ್ಜಂಪುರ, ಪಂಚಾಕ್ಷರಿ ಕೆ.ಎಸ್ ಉಪಾಧ್ಯಕ್ಷರು 2049ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಜ್ಜಂಪುರ ವಲಯ, ಹೆಚ್.ಆರ್ ಚಂದ್ರಪ್ಪ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ಅಜ್ಜಂಪುರ, ಕೊರಗಪ್ಪ ಪೂಜಾರಿ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಅಜ್ಜಂಪುರ ತಾಲೂಕು ಇವರುಗಳು ಉಪಸ್ಥಿತರಿದ್ದು ಶುಭವನ್ನು ಹಾರೈಸಿದರು.
ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ನೇತ್ರಾವತಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ರುದ್ರಪ್ಪ ಹೂಗಾರ್ ಮೇಲ್ವಿಚಾರಕರು ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಚಿತ್ರದುರ್ಗ ಇವರು ಎಂಟು ದಿನಗಳ ಮದ್ಯವರ್ಜನ ಶಿಬಿರವನ್ನು ನಿರ್ವಹಿಸಲಿದ್ದಾರೆ.ಎಂ.ಜಿ ಶ್ರೀನಾಥ್ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಜಾವೂರು ವಲಯ, ರವಿಚಂದ್ರ ಆರ್. ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಅಜ್ಜಂಪುರ ವಲಯ, ಸೇವಾಪ್ರತಿನಿಧಿಗಳು ಜಾವೂರು ಮತ್ತು ಅಜ್ಜಂಪುರ ವಲಯ, ಒಕ್ಕೂಟದ ಅಧ್ಯಕ್ಷರು / ಪದಾಧಿಕಾರಿಗಳು ಜಾವೂರು ಮತ್ತು ಅಜ್ಜಂಪುರ ವಲಯ, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು ಜಾವೂರು ಮತ್ತು ಅಜ್ಜಂಪುರ ವಲಯ, ನವಜೀವನ ಸಮಿತಿ ಸದಸ್ಯರುಗಳು ಹಾಗೂ ಸಾರ್ವಜನಿಕರು ಅಜ್ಜಂಪುರ ತಾಲೂಕು ಇವರುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ಕಾರ್ಯಕ್ರಮವನ್ನು ಕೊರಗಪ್ಪ ಪೂಜಾರಿ ಯೋಜನಾಧಿಕಾರಿ ಸ್ವಾಗತಿಸಿ, ಎಂ.ಜಿ ಶ್ರೀನಾಥ್ ಮೇಲ್ವಿಚಾರಕರು ನಿರೂಪಿಸಿ, ರವಿಚಂದ್ರ ಆರ್. ಮೇಲ್ವಿಚಾರಕರು ವಂದಿಸಿದರು.
