ಮಿಶ್ರಿಕೋಟಿ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 2097ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಿಶ್ರಿಕೋಟಿ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಲಘಟಗಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಧಾರವಾಡ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲಘಟಗಿ ತಾಲೂಕು, ನವಜೀವನ ಸಮಿತಿ ಕಲಘಟಗಿ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳು, ಪೊಲೀಸ್ ಇಲಾಖೆ ಮಿಶ್ರಿಕೋಟಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಿಶ್ರಿಕೋಟಿ, ಪತ್ರಕರ್ತರ ಸಂಘ ಕಲಘಟಗಿ, ವಕೀಲರ ಸಂಘ ಕಲಘಟಗಿ ಮತ್ತು ದಾನಿಗಳ ಸಹಕಾರದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ನಡೆಯುವ 2097ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಜಿ ಬಾಗಬಾನ ಸಭಾ ಭವನ ಮಿಶ್ರಿಕೋಟಿ ಇಲ್ಲಿ ಸಂಪನ್ನಗೊಂಡಿತು.ಐ.ಸಿ ಗೋಕುಲ ಮಾಜಿ ಸದಸ್ಯರು ಜಿಲ್ಲಾ ಪಂಚಾಯತ್ ಧಾರವಾಡ ಇವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿದರು.ಮುತ್ತುಗೌಡ ಯ. ಪಾಟೀಲ ಅಧ್ಯಕ್ಷರು 2097ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಿಶ್ರಿಕೋಟಿ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು.
ಭಾಸ್ಕರ್ ಎನ್. ಯೋಜನಾಧಿಕಾರಿ ಜನಜಾಗೃತಿ ವಿಭಾಗ ಪ್ರಾದೇಶಿಕ ಕಛೇರಿ ಧಾರವಾಡ ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಹನುಮಂತ ನಾಯ್ಕ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ಧಾರವಾಡ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮವಲ್ಲ. ಎಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಸಮುದಾಯದ ಕಾರ್ಯಕ್ರಮಗಳಾದ ನಮ್ಮೂರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಎಪೀಠೋಪಕರಣ ಒದಗಣೆ, ಜ್ಞಾನದೀಪ ಕಾರ್ಯಕ್ರಮದ ಮುಖೇನ ಗೌರವ ಶಿಕ್ಷಕರ ಒದಗಣೆ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಮಾಬುಸಾಬ ಫಕ್ರುಸಾಬ ಬಾಗಬಾನ ಗೌರವಾಧ್ಯಕ್ಷರು 2097ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಿಶ್ರಿಕೋಟಿ, ಡಾl ಶಿವರಂಜನ ಬಾಳಿ ವೈದ್ಯಾಧಿಕಾರಿ, ಸುರೇಶ ಎಂ. ಮರಲಿಂಗಣ್ಣವರ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಧಾರವಾಡ, ಚಂದ್ರಹಾಸ ನಾಯ್ಕ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಲಘಟಗಿ ತಾಲೂಕು ಇವರುಗಳು ಉಪಸ್ಥಿತರಿದ್ದು‌ ಶುಭವನ್ನು ಹಾರೈಸಿದರು.
ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಪ್ರೆಸಿಲ್ಲಾ ಡಿಸೋಜ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಉಮೇಶ್ ಹಡಗಲಿ ಮೇಲ್ವಿಚಾರಕರು ಜನಜಾಗೃತಿ ವಿಭಾಗ ಪ್ರಾದೇಶಿಕ ಕಛೇರಿ ಧಾರವಾಡ ಇವರು ಎಂಟು ದಿನಗಳ ಮದ್ಯವರ್ಜನ ಶಿಬಿರವನ್ನು ನಿರ್ವಹಿಸಲಿದ್ದಾರೆ.
ರೇಖಾ ನರಗುಂದ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಿಶ್ರಿಕೋಟಿ ವಲಯ, ಎಲ್ಲಾ ಮೇಲ್ವಿಚಾರಕರು ಕಲಘಟಗಿ ತಾಲೂಕು, ಸೇವಾಪ್ರತಿನಿಧಿಗಳು ಮಿಶ್ರಿಕೋಟಿ ವಲಯ, ಒಕ್ಕೂಟದ ಅಧ್ಯಕ್ಷರು / ಪದಾಧಿಕಾರಿಗಳು ಕಲಘಟಗಿ ತಾಲೂಕು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು ಕಲಘಟಗಿ ತಾಲೂಕು, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
ಕಾರ್ಯಕ್ರಮವನ್ನು ಅಕ್ಷತಾ ಪ್ರಾರ್ಥಿಸಿ, ಚಂದ್ರಹಾಸ್ ನಾಯ್ಕ ಯೋಜನಾಧಿಕಾರಿ ಸ್ವಾಗತಿಸಿ, ಮಧುಕರ್ ಮೇಲ್ವಿಚಾರಕರು ನಿರೂಪಿಸಿ, ಅರುಂಧತಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ವಂದಿಸಿದರು.