ಅಂತರಾಷ್ಟ್ರೀಯ ಮಾದಕವಸ್ತು ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಬೆಂಗಳೂರು ಪ್ರಾದೇಶಿಕ ವಿಭಾಗದ ಬಾಗೇಪಲ್ಲಿ ತಾಲೂಕಿನಲ್ಲಿ ಕರಪತ್ರ ಬಿಡುಗಡೆ ಮಾಡಲಾಯಿತು .

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ಬಾಗೆಪಲ್ಲಿ ತಾಲೂಕು ಪೊಲೀಸ್ ಇಲಾಖೆಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆಯ ಕರಪತ್ರ ಬಿಡುಗಡೆ ಕಾರ್ಯಕ್ರಮವನ್ನು ವೃತ್ತ ನಿರೀಕ್ಷಕರಾದ ಶ್ರೀ ರಾಜು ಅವರು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ನಂಜುಂಡಪ್ಪ. ಸಬ್ ಇನ್ಸ್ಪೆಕ್ಟರ್ ಗೋಪಾಲ್ ರೆಡ್ಡಿ. ಆರಕ್ಷಕ ಠಾಣೆಯ ಎಲ್ಲಾ ಸಿಬ್ಬಂದಿಗಳ ತಾಲೂಕಿನ ಎಲ್ಲಾ ಕಾರ್ಯಕರ್ತರು. ತಾಲೂಕಿನ ಎಲ್ಲಾ ಪತ್ರಕರ್ತರು ಟಿವಿ ಮಾಧ್ಯಮದವರು ಉಪಸ್ಥಿತರಿದ್ದರು.