ಬೆಂಗಳೂರು ಪ್ರಾದೇಶಿಕ ವಿಭಾಗದ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಪದ್ಮಾವತಿ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಲೂರು ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೋಲಾರ ಜಿಲ್ಲಾ ವೇದಿಕೆಯ ವತಿಯಿಂದ ಕರಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಜಾಗೃತಿ ಮೂಡಿಸುವ ಕರಪತ್ರವನ್ನು ಪುರಸಭೆ ಅಧ್ಯಕ್ಷರಾದ ಮುರಳಿ ಅವರು ಬಿಡುಗಡೆ ಮಾಡಿದರು. ಈ ಸಂದರ್ಭ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಗೆ ಕ್ಷೇತ್ರದಿಂದ ನೀಡಿದ ಆರೋಗ್ಯ ಕಾರ್ಡ್ ವಿತರಣೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಹಿರಿಯ ನಿರ್ದೇಶಕರಾದ ಚಂದ್ರಶೇಖರ್ ಜೆ. ರವರು ವಿತರಿಸಿ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು ಮಾಹಿತಿ ನೀಡಿದರು. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪರಮೇಶ್ವರ್ ರವರು ಮಾಹಿತಿ ನೀಡಿದರು,ಈ ಸಂದರ್ಭ ಕೆರೆ ಅಭಿಯಂತರರು ಅರುಣ್ ಕುಮಾರ್ , ತಾಲೂಕು ಯೋಜನಾಧಿಕಾರಿಗಳಾದ ಶ್ರೀಮತಿ ಪುಷ್ಪ, ಜನಜಾಗೃತಿ ಸದಸ್ಯರಾದ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
