ಬೆಂಗಳೂರು ಪ್ರಾದೇಶಿಕ ವಿಭಾಗದ ಕೊರಟಗೆರೆ ತಾಲೂಕಿನ ಕುಂಚಿಟಿಗ ಮಹಾಸಂಸ್ಥಾನ ಮಠದದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಶ್ರೀ ಶ್ರೀ ಶ್ರೀ ಡಾ. ಹನುಮಂತನಾಥ ಮಹಾಸ್ವಾಮಿಜಿಗಳು ಜಾಗೃತಿ ಮೂಡಿಸುವ ಕರಪತ್ರ ಬಿಡುಗಡೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಗಂಗಮ್ಮ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀ ಜಗದೀಶ್, ರಾಜಣ್ಣ, ಯೋಜನಾಧಿಕಾರಿ ಬಾಲಕೃಷ್ಣ ರವರಿದ್ದರು. ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಮಾಹಿತಿ ಮಾರ್ಗದರ್ಶನವನ್ನು ಜನಜಾಗೃತಿ ವೇದಿಕೆ ಬೆಂಗಳೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ನೆರವೇರಿಸಿದರು. ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ನವಜೀವನ ಪೋಷಕರು, ನವಜೀವನ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
