ಧಾರವಾಡ ಪ್ರಾದೇಶಿಕ ವಿಭಾಗದ ಹಾವೇರಿ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಸಭೆಯ ಉದ್ಘಾಟನೆಯನ್ನು ಧಾರವಾಡ ಪ್ರಾದೇಶಿಕ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೆಗೌಡ, ಜಿಲ್ಲಾ ಜನಜಾಗೃತಿ ಅಧ್ಯಕ್ಷರಾದ ಶ್ರೀ ಮುತ್ತಣ್ಣ ಎಲ್ಲಿಗಾರ್, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ನಾಗರಾಜ್ ಶೆಟ್ಟಿ ರವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಜನಜಾಗೃತಿ ಸಭೆಯಲ್ಲಿ ಮದ್ಯವರ್ಜನ ಶಿಬಿರದ ಅನುಷ್ಠಾನ, ಅಕ್ಟೋಬರ್.2ರ ಕಾರ್ಯಕ್ರಮ, ಪಾನಮುಕ್ತ ಸದಸ್ಯರಿಗೆ ಸ್ವ ಉದ್ಯೋಗ ತರಬೇತಿ, ಸಾಮಾಜಿಕ ಅರಣ್ಯೀಕರಣ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ, ನವಜೀವನ ಪೋಷಕರ ಸಭೆ, ನವಜೀವನ ಸಮಿತಿ ಸದಸ್ಯರ ಫ್ರೀ ಕಾನ್ಫರೆನ್ಸ್ ಮೀಟಿಂಗ್ ಇತ್ಯಾದಿ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಭೆಯಲ್ಲಿ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಜನಜಾಗೃತಿ ವಿಭಾಗದ ಯೋಜನಾಧಿಕಾರಿ, ತಾಲೂಕಿನ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
