ವಿಜಯನಗರ ಜಿಲ್ಲೆಯ ಕಂಪ್ಲಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾ ಮಟ್ಟದ ಗಾಂಧಿ ಸ್ಮೃತಿ ಮತ್ತು ನವಜೀವನ ಸಮೀತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Janajagurthi Vedike News

ಹೊಸಪೇಟೆ ವಿಭಾಗ ವಿಜಯನಗರ ಜಿಲ್ಲೆಯ ಕಂಪ್ಲಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾ ಮಟ್ಟದ ಗಾಂಧಿ ಸ್ಮೃತಿ ಮತ್ತು ನವಜೀವನ ಸಮೀತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಕಂಪ್ಲಿ ತಾಲೂಕಿನ ಶಾಸಕರಾದ ಶ್ರೀ. ಜೆ.ಎನ್‌ ಗಣೇಶ ರವರು ಉಧ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ನಟರಾಜ ಬಾದಾಮಿರವರು ವಹಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ಶ್ರೀ ಪುರುಶೋತ್ತಮ್‌ ಪಿ.ಕೆ ಇವರು ಭಾಗವಹಿಸಿದ್ದು, ಕಾರ್ಯಕ್ರಮದಲ್ಲಿ ಜನಜಾಗೃತಿ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ಮಾರ್ಗದರ್ಶನ ನೀಡಿದರು. ಹಾಗೂ ಈ ಕಾರ್ಯಕ್ರಮದಲ್ಲಿ ತಾಲೂಕಿನ ತಾಶೀಲ್ದಾರರಾದ ಶ್ರೀಮತಿ. ಗೌಸೀಯಾ ಬೇಗಂ ರವರು ಭಾಗವಹಿಸಿದ್ದು, ಗಾಂಧಿ ಜಯಂತಿ ಆಚರಣೆ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಹಾಗೂ ಕಂಪ್ಲಿ ಪುರಸಭೆ ಅಧ್ಯಕ್ಷರಾದ ಶಾಂತಾ ವಿಧ್ಯಾಧರ್‌ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಕಾರ್ಯಕ್ರಮಕ್ಕೆ ಭಾಗವಹಿಸಿದ ಎಲ್ಲ ಗಣ್ಯರನ್ನು ಜಿಲ್ಲಾ ನಿರ್ದೇಶಕರಾದ ಚಿದಾನಂದ ಕೆ ರವರು ಸ್ವಾಗತಿಸಿ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಸುಧಿರ್‌ ಹಾಗೂ ಚೇಗೂರು ಷಣ್ಮುಕ ಹಾಗೂ ಊರಿನ ಹಿರಿಯರಾದ ಹೆಮ್ಮಯ್ಯಸ್ವಾಮಿಯವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ 35 ನವಜೀವನ ಸಮೀತಿ ಸದಸ್ಯರಿಗೆ ಗುಲಾಬಿ ಹೂ ನೀಡುವುದರ ಮೂಲಕ ಅಭಿನಂಧಿಸಲಾಯಿತು.