ಹುಣಸೂರು ತಾಲೂಕು ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ತಾಲ್ಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀ ದಾರಾ ಮಹೇಶ ಕಾರ್ಯಕ್ರಮ ವನ್ನು ಉದ್ಘಾಟಿಸಿದರು.ಹುಣಸೂರು ತಾಲ್ಲೂಕಿನ ಯೋಜನಾಧಿಕಾರಿಗಳಾದ ರಮೇಶ್ ಪಿ. ಕೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ರವಿಶಂಕರ್ ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರೇಶ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ಶ್ರೀ ಸೋಮಶೇಖರ ಮಾತನಾಡಿ ” ತಂಬಾಕು ಸೇವನೆ, ಮದ್ಯಪಾನದಿಂದ ಆಗುವ ದುಷ್ಪರಿಣಾಮಗಳು ಹಾಗೂ ಅದನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರು ಹಾಗೂ ವಲಯ ಮೇಲ್ವಿಚಾರಕರಾದ ಸವಿತಾ ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ ಹಾಗೂ ಸೇವಾ ಪ್ರತಿನಿಧಿ ಮನು,ಧನಲಕ್ಷ್ಮೀ, ಸುಮ ಸದಸ್ಯರು ಮಕ್ಕಳು ಹಾಜರಿದ್ದರು.
