ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬನ್ನೂರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಿಲ್ಲಾ ಜನಜಾಗೃತಿ ವೇದಿಕೆ ಮೈಸೂರು, ಪಂಚರತ್ನ ಸ್ಮಾರಕ ಭವನ ಆಡಳಿತ ಮಂಡಳಿ ಮಾರಗೌಡನಹಳ್ಳಿ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬಸವನಹಳ್ಳಿ ವಲಯ, ಪೊಲೀಸ್ ಇಲಾಖೆ ಮತ್ತು ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರ ಬನ್ನೂರು, ಪತ್ರಕರ್ತರ ಸಂಘ ಬನ್ನೂರು, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ದಾನಿಗಳು ಬಸವನಹಳ್ಳಿ ವಲಯ ಇವರುಗಳ ಸಂಯುಕ್ತ ಆಶ್ರಯದಲ್ಲಿ 1547ನೇ ಮದ್ಯವರ್ಜನ ಶಿಬಿರ ಮಾರಗೌಡನಹಳ್ಳಿ ಪಂಚರತ್ನ ಸ್ಮಾರಕ ಭವನದಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಬೃಂದಾ ಕೃಷ್ಣೇಗೌಡ ಅಧ್ಯಕ್ಷರು ಹನುಮನಾಳು ಗ್ರಾಮ ಪಂಚಾಯಿತಿ ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಚಿಕ್ಕರಾಜಶೆಟ್ಟಿ ಆರಕ್ಷಕ ನಿರೀಕ್ಷಕರು ಬನ್ನೂರು ಇವರು ನೆರವೇರಿಸಿರುತ್ತಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಲಕ್ಷ್ಮಣ ಎಂ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೈಸೂರು, ಶ್ರೀ ಹೊಂಬೇಗೌಡ ಶ್ರೀ ಕೃಷ್ಣ ಮಾಡ್ರನ್ ಬಿನ್ನಿ ರೈಸ್ ಮಿಲ್ ಮಾಲೀಕರು, ಶ್ರೀ ಅಶೋಕ್ ಅಧ್ಯಕ್ಷರು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬಸವನಹಳ್ಳಿ, ಶ್ರೀ ನಾರಾಯಣ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಮೈಸೂರು, ಶ್ರೀ ಜಯರಾಂ ಅಧ್ಯಕ್ಷರು ಗ್ರಾಮ ಪಂಚಾಯಿತಿ ಮಲ್ಲಿಯೂರು, ಶ್ರೀ ಸ್ವಾಮಿರಾಜ್ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರು, ಶ್ರೀ ಶಂಕರ್ ಸದಸ್ಯರು ಹನುಮನಾಳು ಗ್ರಾಮ ಪಂಚಾಯಿತಿ, ಜೈಕುಮಾರ್ ಕೋಶಾಧಿಕಾರಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಭಾಸ್ಕರ್.ಎನ್ ಯೋಜನಾಧಿಕಾರಿಗಳು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೈಸೂರು ಪ್ರಾದೇಶಿಕ ವಿಭಾಗ, ಶ್ರೀ ಉಮಾವತಿ.ಡಿ ಯೋಜನಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬನ್ನೂರು, ನಂದಕುಮಾರ್ ಪಿ.ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ಜಯಲಕ್ಷ್ಮಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಇವರುಗಳು ಉಪಸ್ಥಿತರಿದ್ದರು. ಶ್ರೀ ಚಂದ್ರಹಾಸ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಸವನಹಳ್ಳಿ ವಲಯ, ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಹಾಗೂ ಸೇವಾಪ್ರತಿನಿಧಿಗಳು ಬಸವನಹಳ್ಳಿ ವಲಯ, ಮತ್ತು ಒಕ್ಕೂಟದ ಪದಾಧಿಕಾರಿಗಳು, ನವಜೀವನ ಸಮಿತಿ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
