ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಬ್ರಹ್ಮಾವರ. ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ಚೇತನಾ ಪ್ರೌಢಶಾಲೆ ಮಾಬುಕಳದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ತಾಲೂಕು ಜನಜಾಗೃತಿ ಅಧ್ಯಕ್ಷರಾದ ಶ್ರೀಯುತ ಅಚ್ಯುತ್ ಪೂಜಾರಿ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜು ಬ್ರಹ್ಮಾವರದ ಸಹ ಶಿಕ್ಷಕರಾದ ಶಶಿಧರ್ ಶೆಟ್ಟಿಯವರು ದುಶ್ಚಟಗಳ ಬಗ್ಗೆ, ದುಶ್ಚಟಗಳು ಇರುವ ಮಕ್ಕಳಿಗೆ ಆರೋಗ್ಯದಲ್ಲಿ ಆಗುವ ಸಮಸ್ಯೆಗಳ ಬಗ್ಗೆ, ಅವರಿಂದ ಸಮಾಜದಲ್ಲಿ ಆಗುವ ತೊಂದರೆಗಳ ಬಗ್ಗೆ ತಿಳಿಸುತ್ತಾ ಮುಂದಿನ ದಿನಗಳಲ್ಲಿ ದುಶ್ಚಟಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಸಂಕಲ್ಪ ಮಾಡಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀಯುತ ಪ್ರತಾಪ್ ಶೆಟ್ಟಿ ಜನಜಾಗೃತಿ ವೇದಿಕೆ ಸದಸ್ಯರು ಪಾಂಡೇಶ್ವರ ವಲಯಮತ್ತು ಬಿ ಡಿ ಶೆಟ್ಟಿ ಕಾಲೇಜು ಮಾಬುಕಳದ ಪ್ರಾಂಶುಪಾಲರಾದ ಶ್ರೀಯುತ ಬಾಲಕೃಷ್ಣ ಶೆಟ್ಟಿ ಯವರು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇತನ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಯುತ ಗಣೇಶ್ ಜಿ ವಹಿಸಿದ್ದರು. ಕಾರ್ಯಕ್ರಮವನ್ನು ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ನೇತ್ರಾವತಿ ನಿರೂಪಿಸಿ, ಸೇವಾಪ್ರತಿನಿಧಿ ಚಂದ್ರಕಲಾ ಸ್ವಾಗತಿಸಿ ವಂದಿಸಿದರು.
