ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 1583ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 1583ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ಮಾಜಿ ಶಾಸಕರಾದ ಶ್ರೀ ಕೆ.ಪಿ ಬಚ್ಚೇಗೌಡ ರವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಗಾಯತ್ರಿ ಅಧ್ಯಕ್ಷರು ಮಂಚನ್ಮಲ್ಲಿ ಗ್ರಾಮ ಪಂಚಾಯಿತಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಜನಜಾಗೃತಿ ಜಿಲ್ಲಾಧ್ಯಕ್ಷರಾದ ಯಲುವಹಳ್ಳಿ ರಮೇಶ್ , ಜಿಲ್ಲಾ ಪಂಚಾಯತಿ ಸದಸ್ಯರು ಮುನೇಗೌಡ, ಜಿಲ್ಲಾ ನಿರ್ದೇಶಕರಾದ ಸಿ ಎಸ್ ಪ್ರಶಾಂತ್, ಮಧು, ಬೆಂಗಳೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು, ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಧನಂಜಯ್ ರವರು ಸ್ವಾಗತಿಸಿದರು, ಶಿಬಿರಾಧಿಕಾರಿ ದಿನೇಶ್ ಮರಾಠಿ, ಆರೋಗ್ಯ ಸಹಾಯಕಿ ಶ್ರೀಮತಿ ಫಿಲೋಮಿನಾ, ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು