ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮಾಗಡಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ರಾಮನಗರ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಾಗಡಿ ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಗಡಿ, ನೇತನಹಳ್ಳಿ ಗ್ರಾಮ ಪಂಚಾಯಿತಿ, ಆರಕ್ಷಕ ಠಾಣೆ ಮಾಗಡಿ, ಸರ್ವ ಸಂಘ-ಸಂಸ್ಥೆಗಳು, ಸಾರ್ವಜನಿಕರು ಮತ್ತು ದಾನಿಗಳು ಇವರುಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ಡಾll.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾll.ಹೇಮಾವತಿ.ವಿ ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 1586ನೇ ಮದ್ಯವರ್ಜನ ಶಿಬಿರ ಶ್ರೀ ರುದ್ರ ಮುನೇಶ್ವರ ಮಠ ಗುಮ್ಮಸಂದ್ರ ಮಾಗಡಿ ಇಲ್ಲಿ ಉದ್ಘಾಟನೆಗೊಂಡಿತು. ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಚಂದ್ರಶೇಖರ ಮಹಾಸ್ವಾಮಿಜಿಗಳು ಶ್ರೀ ರುದ್ರ ಮುನೇಶ್ವರ ಮಠ ಗುಮ್ಮಸಂದ್ರ ಮಾಗಡಿ ಇವರು ವಹಿಸಿ ಆಶೀರ್ವಚನವನ್ನು ನೀಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಚಿಕ್ಕಣ್ಣಯ್ಯ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ರಾಮನಗರ ಇವರು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಎಂ.ಎನ್ ಮಂಜುನಾಥ್ ಅಧ್ಯಕ್ಷರು 1586ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾಗಡಿ ಇವರು ವಹಿಸಿದ್ದರು. ಶ್ರೀ ಭಾಸ್ಕರ್. ಎನ್ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೈಸೂರು ಪ್ರಾದೇಶಿಕ ವಿಭಾಗ ಇವರು ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಪುರುಷೋತ್ತಮ್ ಅಧ್ಯಕ್ಷರು ನೇತನಹಳ್ಳಿ ಗ್ರಾಮ ಪಂಚಾಯಿತಿ, ಶ್ರೀಮತಿ ಕೆ.ಆರ್ ವಿಜಯಾ ರೂಪೇಶ್ ಅಧ್ಯಕ್ಷರು ಪುರಸಭೆ ಮಾಗಡಿ, ಶ್ರೀ ಡಾ.ರಾಜೇಶ್ ಮುಖ್ಯ ವೈದ್ಯಾಧಿಕಾರಿಗಳು ಮಾಗಡಿ, ಶ್ರೀ ಜಯಕರ ಶೆಟ್ಟಿ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ) ರಾಮನಗರ, ಶ್ರೀಮತಿ ಕಲ್ಪನಾ ಶಿವಣ್ಣ ಸಮಾಜ ಸೇವಕರು ಮಾಗಡಿ, ಶ್ರೀ ಶಂಕರ್ ಅಧ್ಯಕ್ಷರು ರೋಟರಿ ಸಂಸ್ಥೆ ಮಾಗಡಿ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶುಭವನ್ನ ಹಾರೈಸಿದರು. ಶ್ರೀ ನಂದಕುಮಾರ್ ಪಿ.ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ಪ್ರತಿಮಾ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮಾಗಡಿ ವಲಯ, ಸೇವಾಪ್ರತಿನಿಧಿಗಳು ಮಾಗಡಿ ವಲಯ, ಮತ್ತು ನವಜೀವನ ಸಮಿತಿ ಸದಸ್ಯರು ಇವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶ್ರೀ ಗೋಪಾಲಕೃಷ್ಣ.ಎ ಯೋಜನಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ) ಮಾಗಡಿ ತಾಲೂಕು ಇವರು ಸ್ವಾಗತಿಸಿ ನಿರೂಪಿಸಿ ಜಯಣ್ಣ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಾಗಡಿ ವಂದಿಸಿದರು.
