ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ನಡೆದ 1590 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಬಸವಣ್ಣಪ್ಪ ತುಪಾಕಿ ಯವರು ಮುಖ್ಯ ಅತಿಥಿಯಾಗಿ ಮಾಹಿತಿ ನೀಡಿದರು. ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ನಿಸರ್ಗ ನಾರಾಯಣ ಸ್ವಾಮಿಯವರು ಕಾರ್ಯಕ್ರಮದ ಉದ್ಘಾಟನೆ ವಿವರಿಸಿದರು.ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಪಿಳ್ಳ ಮನಿ ಶಾಮಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ ಎಂ ರವರು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನೆ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ರವರು ವಹಿಸಿದ್ದರು. ಗೌರವಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಕೃಷ್ಣದಾಯ ಕಲ್ಯಾಣ ಮಂಟಪದ ಮಾಲೀಕರು ಉಪಸ್ಥಿತರಿದ್ದರು. ಚಲನಚಿತ್ರ ನಟಿ ಶ್ರೀಮತಿ ಮಾಲತಿ ಶ್ರೀ ರವರು ಹಾಗೂ ಕಿರುತೆರೆ ನಟ ನಂದೀಶ್ ರವರು ಭಾಗವಹಿಸಿದ್ದರು. ಶ್ರೀ ಪಟಾಲಪ್ಪ, ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಶ್ರೀಮತಿ ವೀಣಾ ರಮೇಶ್ ಹಾಗೂ ಸದಸ್ಯರು ಜಿಲ್ಲಾ ನಿರ್ದೇಶಕರು, ಜನಜಾಗೃತಿ ಯೋಜನಾಧಿಕಾರಿಗಳು, ತಾಲ್ಲೂಕು ಯೋಜನಾಧಿಕಾರಿಗಳು, ಶಿಬಿರಾಧಿಕಾರಿಗಳು, ಆರೋಗ್ಯ ಸಹಾಯಕರು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ನವ ಜೀವನ ಸಮಿತಿ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಹಾಗೂ ಶಿಬಿರಾರ್ಥಿಗಳು ಹಾಗೂ ಶಿಬಿರಾರ್ಥಿ ಬಂಧುಗಳ ಕುಟುಂಬಸ್ಥರು ಉಪಸ್ಥಿತರಿದ್ದರು.
