ಕೆಂಭಾವಿ ವಲಯದಲ್ಲಿ ತಾಲೂಕು ಮಟ್ಟದ. ಗಾಂಧಿ ಜಯಂತಿ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಜನ ಜಾಗೃತಿ ಜಾಥ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ರೀ ಚೆನ್ನ ಬಸವ ಶಿವಾಚಾರ್ಯರು ಚಾಲನೆ ನೀಡಿದರು. ಸುಮಾರು 300 ಜನ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಮಾವೇಶ ಕಾರ್ಯಕ್ರಮವನ್ನು ಶ್ರೀ ಶರಣು ಕಾಕ ಡಿಗ್ಗವ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರು ಕಮಲಾಕ್ಷ ಅವರು ಮಾತಾಡಿ. ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ ಮತ್ತು ಯೋಜನೆಯ ಕಾರ್ಯಕ್ರಮಗಳಿಗೆ ಪೂಜ್ಯ ಹೆಗ್ಗಡೆಯವರು ಎಲ್ಲಾ ರೀತಿಯಲ್ಲಿ ಸ್ವಸ್ಥ್ಯ ಸಮಾಜದ ಸೇವೆಗಳಿಗೆ ಹೆಚ್ಚಿನ ಪ್ರಾಧಾನ್ಯ ನೀಡುತ್ತಿದ್ದಾರೆ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹುಟ್ಟು ಹಾಕಿ ಸಾವಿರಾರು ಮಂದಿ ದುಶ್ಚಟಕ್ಕೆ ಬಲಿಯಾದವರನ್ನು ವ್ಯಸನ ಮುಕ್ತ ಜೀವನ ನಡೆಸಲು ಪೂಜ್ಯರು ಅವಕಾಶ ಮಾಡಿಕೊಟ್ಟಿದ್ದಾರೆ. ದೃಷ್ಟಿಯಲ್ಲಿ ಅಕ್ಟೋಬರ್ 2 ಗಾಂಧಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಹನುಮಂತ P S I ಅವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಮಾಜದ ಎಲ್ಲ ಜನರಿಗೆ ಆರ್ಥಿಕ ಮತ್ತು ಸಾಮಾಜಿಕ ಶಿಸ್ತನ್ನು ಮೂಡಿಸುವ ದೊಡ್ಡ ಸಂಸ್ಥೆಯಾಗಿದೆ.
