ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ಸ್ಮತಿ ಜನ ಜಾಗೃತಿ ಜಾಥ ಮತ್ತು ಬೃಹತ್ ಜನಜಾಗೃತಿ ಸಮಾವೇಶ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಜಗಳೂರು ಉಪಸ್ಥಿತಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ಸ್ಮೃತಿ ಜನ ಜಾಗೃತಿ ಜಾಥ ಮತ್ತು ಬೃಹತ್ ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಗುರು ತಿಪ್ಪೇರುದ್ರ ಸ್ವಾಮಿ ಸಭಾಭವನ ನಾಯಕನಟ್ಟಿಯಲ್ಲಿ ಆಯೋಜಿಸಿದ್ದು ಜಾತ ಕಾರ್ಯಕ್ರಮವನ್ನು ನಾಯಕನಹಟ್ಟಿಯ ಆರಕ್ಷಕ ನಿರೀಕ್ಷಕರಾದ ಲೋಕೇಶ್ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ದಂಡಾಧಿಕಾರಿಗಳಾದ ರಘುಮೂರ್ತಿ ಟಿ ಇವರು ನೆರವೇರಿಸಿದರು ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷರು ಡಿ ಶದಕ್ಷರಪ್ಪ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಚಿತ್ರದುರ್ಗ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಗೀತಾ ಬಿ ಯವರು ಭಾಗವಹಿಸಿ ಮಹಾತ್ಮ ಗಾಂಧೀಜಿಯವರ ಜೀವನಕ್ರಮ ಸರಳತೆ ತತ್ವ-ಸಿದ್ಧಾಂತಗಳ ಜೊತೆಗೆ ದುಶ್ಚಟ ಮುಕ್ತ ಸಮಾಜ ರೂಪಿಸುವಲ್ಲಿ ಮಹಿಳೆಯರು ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು ಜಿಲ್ಲಾ ನಿರ್ದೇಶಕರು ಯೋಜನಾಧಿಕಾರಿಗಳು ನವಜೀವನ ಸಮಿತಿ ಸದಸ್ಯರು ಹಾಗೂ ಹಾಗೂ ವಿವಿಧ ಗಣ್ಯರು ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಸಲಾಯಿತು.