ಶಿವಮೊಗ್ಗ ಜಿಲ್ಲೆಯಲ್ಲಿ ಗಾಂಧೀ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಗಾಂಧೀಸ್ಮೃತಿ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಶಿವಮೊಗ್ಗ ಜಿಲ್ಲೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿವಮೊಗ್ಗ ಇವರ ವತಿಯಿಂದ ಗಾಂಧೀ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಗಾಂಧೀಸ್ಮೃತಿ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮ ಶಿವಮೊಗ್ಗದ ಚೈತನ್ಯ ಸೌಧದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲೆಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಆನಂದ ಕುಮಾರ್ ಜಿ ರವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕೆ.ಎಸ್. ಈಶ್ವರಪ್ಪ ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರು, ವಿಧಾನಸಭಾ ಕ್ಷೇತ್ರ ಶಿವಮೊಗ್ಗ ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಚಂದ್ರಶೇಖರ್ ಜೆ ಮಾನ್ಯ ನಿರ್ದೇಶಕರು ಶಿವಮೊಗ್ಗ, ಶ್ರೀಮತಿ ಯಮುನಾ ರಂಗೇಗೌಡ ಸದಸ್ಯರು ಮಹಾನಗರ ಪಾಲಿಕೆ ಶಿವಮೊಗ್ಗ, ಶ್ರೀ ಪ್ರಭಾಕರ್ ಸದಸ್ಯರು ಮಹಾನಗರ ಪಾಲಿಕೆ ಶಿವಮೊಗ್ಗ, ಶ್ರೀ ಶ್ರೇಯಸ್ ಸದಸ್ಯರು ಮಹಾನಗರ ಪಾಲಿಕೆ ಶಿವಮೊಗ್ಗ, ಶ್ರೀ ನಾಗರಾಜ್ ಸೂಡ ಅಧ್ಯಕ್ಷರು ಶಿವಮೊಗ್ಗ, ಶ್ರೀ ಉದಯ್ ಕುಮಾರ್ ಶೆಟ್ಟಿ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ, ಶ್ರೀ ರಮೇಶ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ, ಶ್ರೀ ರಾಮಣ್ಣ ಗೌಡ ಜಿಲ್ಲಾ MIS ಯೋಜನಾಧಿಕಾರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯೋಜನಾಧಿಕಾರಿ ಉಮೇಶ್ ಸ್ವಾಗತಿಸಿ, ಯೋಜನಾಧಿಕಾರಿ ರೂಪ ಆದರ್ಶ್ ವಂದಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರುತಿ ನಿರೂಪಿಸಿದರು.