ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹೋನ್ನತ ಕಾರ್ಯಕ್ರಮಗಳಲ್ಲೊಂದಾದ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ 1482 ನೇ ಮದ್ಯವರ್ಜನ ಶಿಬಿರದ ಪ್ರಥಮ ವರ್ಷದ ವಾರ್ಷಿಕೋತ್ಸವ ಮತ್ತು ನವಜೀವನೋತ್ಸವ ಕಾರ್ಯಕ್ರಮವನ್ನು ಮುತ್ಯಾಲಮ್ಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು. ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಮದ್ಯ ವರ್ಜನ ಶಿಬಿರಗಳಲ್ಲಿ ಸೇರಿ ಪಾನಮುಕ್ತರಾದ ನವಜೀವನ ಸಮಿತಿಯ ಸದಸ್ಯರಿಗೆ ಅಭಿನಂದನೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮಾಡಲಾಯಿತು.
ಕಾರ್ಯಕ್ರಮವನ್ನು ಶ್ರೀ ಹೇಮರಾಜ್ ಸದಸ್ಯರು ಜನಜಾಗೃತಿ ವೇದಿಕೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಸುಧಾ ಲಕ್ಷ್ಮಿ ನಾರಾಯಣ್ ಅಧ್ಯಕ್ಷರು ನಗರಸಭೆ ದೊಡ್ಡಬಳ್ಳಾಪುರ, ಮುಖ್ಯ ಅತಿಥಿ ಸ್ಥಾನದಲ್ಲಿ ಶ್ರೀ ಉಮರಬ್ಬ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶ್ರೀ ತಾ ನಾ ಪ್ರಭುದೇವ್ ಮಾಜಿ ಸದಸ್ಯರು ನಗರಸಭೆ, ಶ್ರೀ ನರಸಿಂಹ ಸದಸ್ಯರು ಜಿಲ್ಲಾ ಜನ ಜಾಗೃತಿ ವೇದಿಕೆ, ಶ್ರೀಮತಿ ಸುಧಾ ಭಾಸ್ಕರ್ ನಾಯಕ್ ಯೋಜನಾಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕು, ಶ್ರೀ ಗಣೇಶ್ ಆಚಾರ್ಯ ಯೋಜನಾಧಿಕಾರಿಗಳು ಜನಜಾಗೃತಿ ವೇದಿಕೆ ಪ್ರಾದೇಶಿಕ ಕಚೇರಿ ಬೆಂಗಳೂರು, ಶ್ರೀಮತಿ ವೈಷ್ಣವಿ ನಾಗರಾಜ್ ಜ್ಞಾನವಿಕಾಸ ಸಮನ್ವಯಾಧಿಕಾರಿಗಳು, ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿಜಯಾ, ಕೃಷಿ ಮೇಲ್ವಿಚಾರಕರಾದ ಶ್ರೀಯುತ ಸತೀಶ್, ವಲಯದ ಎಲ್ಲಾ ಸೇವಾಪ್ರತಿನಿಧಿಗಳು ನವ ಜೀವನ ಸಮಿತಿಯ ಪರ್ವ ಸದಸ್ಯರು ಉಪಸ್ಥಿತರಿದ್ದರು.
