ಪಾನಮುಕ್ತ ನವ ಜೀವನ ಸದಸ್ಯರಿಗೆ ಸ್ವಉದ್ಯೋಗ ತರಬೇತಿ ಕಾರ್ಯಗಾರ

Janajagurthi Vedike News

ತುಮಕೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಂಗಳೂರು ಪ್ರಾದೇಶಿಕ ವಿಭಾಗ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ತುಮಕೂರು ಜಿಲ್ಲೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ತುಮಕೂರು ಇದರ ಸಂಯುಕ್ತ ಆಶ್ರಯದಲ್ಲಿ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ಪಾನಮುಕ್ತರಾದ ನವ ಜೀವನ ಸಮಿತಿ ಸದಸ್ಯರಿಗೆ ವಿಶೇಷವಾಗಿ ಆರು ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಗಾರವನ್ನು Rseti ಯ ನಿರ್ದೇಶಕರಾದ ಶ್ರೀ ಅರುಣ್ ಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಪ್ರೆಸ್ ರಾಜಣ್ಣ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಾಯಿ ಅಚ್ಚುತ ಹೌಸಿಂಗ್ ತುಮಕೂರು ಇದರ ಸಂಸ್ಥಾಪಕರಾದ ಶ್ರೀ ಚಂದ್ರಶೇಖರ್ ರವರು ಭಾಗವಹಿಸಿದ್ದರು. ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯ ರವರು ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಯೊಂದಿಗೆ ಎಲ್ಲರನ್ನ ಸ್ವಾಗತಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಸಂಸ್ಥೆಯ ಉಪನ್ಯಾಸಕಿಯಾದ ಶ್ರೀಮತಿ ರಮ್ಯಾ ರವರು ನೆರವೇರಿಸಿದರು. ಜನ ಜಾಗೃತಿ ವೇದಿಕೆಯ ಮೇಲ್ವಿಚಾರಕರಾದ ಶ್ರೀ ದರ್ಶನ್ ರವರು ವಂದಿಸಿದರು. ಉಪನ್ಯಾಸಕರಾದ ಶ್ರೀ ಪ್ರದೀಪ್ ಉಪಸ್ಥಿತರಿದ್ದರು. ತರಬೇತಿ ಕಾರ್ಯಗಾರದಲ್ಲಿ ಒಟ್ಟು 30 ಜನ ನವಜೀವನ ಸಮಿತಿ ಸದಸ್ಯರು ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದರು.