ಗುಂಡ್ಲುಪೇಟೆ ತಾಲೂಕಿನಲ್ಲಿ 1644ನೇ ಸಮುದಾಯ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ) ಗುಂಡ್ಲುಪೇಟೆ ತಾಲೂಕು ಚಾಮರಾಜನಗರ ಜಿಲ್ಲೆ, ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, 1644ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಗುಂಡ್ಲುಪೇಟೆ, ಪ್ರಗತಿಬಂಧು ಮತ್ತು ಸ್ವ-ಸಹಾಯ ಸಂಘಗಳ ಒಕ್ಕೂಟ ಗುಂಡ್ಲುಪೇಟೆ ತಾಲೂಕು, ಗ್ರಾಮ ಪಂಚಾಯಿತಿಗಳು, ಪುರಸಭೆ, ಸಾರ್ವಜನಿಕ ಆಸ್ಪತ್ರೆ, ಆರಕ್ಷಕ ಠಾಣೆ ಗುಂಡ್ಲುಪೇಟೆ ಹಾಗೂ ಸಾರ್ವಜನಿಕರು ಮತ್ತು ದಾನಿಗಳ ಸಂಯುಕ್ತ ಆಶ್ರಯದಲ್ಲಿ ಪದ್ಮವಿಭೂಷಣ ಪರಮಪೂಜ್ಯ ಡಾll ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾll ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ( ಜಾಗೃತಿ ಸೌಧ ) ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಗುಂಡ್ಲುಪೇಟೆ ತಾಲೂಕಿನ ಶ್ರೀ ಶನೇಶ್ವರಸ್ವಾಮಿ ದೇವಸ್ಥಾನದ ಸಮುದಾಯ ಭವನದಲ್ಲಿ 1644ನೇ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ರವಿಶಂಕರ್ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಚಾಮರಾಜನಗರ ಜಿಲ್ಲೆ ಇವರು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿದರು.ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಶ್ರೀ ಕುಮಾರಸ್ವಾಮಿ ಅಧ್ಯಕ್ಷರು 1644ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಗುಡ್ಲುಪೇಟೆ ಇವರು ವಹಿಸಿ ಶುಭಾಶಯವನ್ನು ಕೋರಿದರು.ಶ್ರೀ ಭಾಸ್ಕರ್. ಎನ್ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೈಸೂರು ಪ್ರಾದೇಶಿಕ ವಿಭಾಗ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನ್ನಾಡಿದರು.ಮುಖ್ಯ ಅತಿಥಿಗಳಾಗಿ ಶ್ರೀಮತಿ ಲತಾ ಬಂಗೇರ ಗೌರವಾನ್ವಿತ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಚಾಮರಾಜನಗರ ಜಿಲ್ಲೆ ಇವರು ಮಾತನಾಡಿ ಗ್ರಾಮಾಭಿವೃದ್ಧಿ ಸಂಸ್ಥೆಯ ಮೂಲಕ ಸಮುದಾಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಾರ್ಯಕ್ರಮಗಳನ್ನು ಪರಿಚಯಿಸುವುದರೊಂದಿಗೆ ವೇದಿಕೆಯ ಮೂಲಕ ಶುಭವನ್ನು ಹಾರೈಸಿದರು.ವೇದಿಕೆಯಲ್ಲಿ ಶ್ರೀ ಪ್ರಸಾದ್ ಹೂರದಹಳ್ಳಿ ಉಪಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಚಾಮರಾಜನಗರ ಜಿಲ್ಲೆ, ಶ್ರೀ ಮಹೇಂದ್ರ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಚಾಮರಾಜನಗರ ಜಿಲ್ಲೆ, ಶ್ರೀ ಸುರೇಶ್ ನಾಯಕ್ ಅಧ್ಯಕ್ಷರು ಕರವೇ ಗುಂಡ್ಲುಪೇಟೆ, ಶ್ರೀ ನಾಗೇಶ್ ಯೋಗ ಶಿಕ್ಷಕರರು, ಶ್ರೀ ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ಪ್ರೆಸಿಲ್ಲಾ ಡಿ ಸೋಜಾ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರುಗಳು ಉಪಸ್ಥಿತರಿದ್ದರು. ತಾಲೂಕಿನ ಎಲ್ಲಾ ಮೇಲ್ವಿಚಾರಕರು, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಹಾಗೂ ನವಜೀವನ ಸದಸ್ಯರುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ಕಾರ್ಯಕ್ರಮವನ್ನು ಶ್ರೀ ಚಂದ್ರಶೇಖರ್ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುಂಡ್ಲುಪೇಟೆ ತಾಲೂಕು ಇವರು ಸ್ವಾಗತಿಸಿ, ಶ್ರೀಮತಿ ಮಂಜುಳ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುಂಡ್ಲುಪೇಟೆ ತಾಲೂಕು ಇವರು ನಿರೂಪಿಸಿ ವಂದಿಸಿದರು.