ಗದಗ ಜಿಲ್ಲೆಯ ಗದಗ ತಾಲ್ಲೂಕಿನ ನವಜೀವನ ಸದಸ್ಯರ ಶ್ರೀ ಮಂಜುನಾಥ ಸ್ವಾಮಿಗೆ ಸಹಸ್ರ ಬಿಲ್ವಾರ್ಚನೆ ಹಾಗೂ ನವಜೀವನೋತ್ಸವ ಕಾರ್ಯಕ್ರಮವು ಈ ದಿನ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಎಸ್. ಬಿ. ಅಸೂಟಿ ಸರ್ ರವರು ವಹಿಸಿದ್ದರು. ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ವಿವೇಕ್ ವಿನ್ಸಂಟ್ ಪಾಯಸ್ ಸರ್ ರವರು ನೆರವೇರಿಸಿ ನವಜೀವನ ಸದಸ್ಯರಿಗೆ ಹಾಗೂ ಕುಟುಂಬಸ್ಥರಿಗೆ ಉತ್ಸಾಹ ತುಂಬುವ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಎರಡು ಜನ ನವಜೀವನ ಸದಸ್ಯರು ತಮ್ಮ ಅನುಭವ ಹಂಚಿಕೊಂಡರ. ನಂತರ ಗದಗ ಜಿಲ್ಲೆಯ ಹಿರಿಯ ಸದಸ್ಯರಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಪಾನಮುಕ್ತ ಬದುಕಿಗೆ ಶುಭ ಹಾರೈಸಿದರು.