ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ” ಜಾಗೃತಿಸೌಧ ” ದಲ್ಲಿ 198ನೇ ವಿಶೇಷ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಶ್ರೀ ವಸಂತ ಸಾಲಿಯಾನ್ ಸ್ಥಾಪಕಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ಮೋಹನದಾಸ್ ಗೌಡ ವೈದ್ಯಾಧಿಕಾರಿಗಳು, ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಪ್ರಾದೇಶಿಕ ನಿರ್ದೇಶಕರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ಮೋಹನ್ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ಕಿಶೋರ್ ಪ್ರಬಂಧಕರು ಜಾಗೃತಿಸೌಧ, ಶಿಬಿರಾಧಿಕಾರಿಗಳಾದ ಶ್ರೀ ವಿದ್ಯಾಧರ್, ಶ್ರೀ ನಂದಕುಮಾರ್ ಪಿ ಪಿ, ಶ್ರೀ ನಾಗೇಂದ್ರ, ಶ್ರೀ ರಾಜೇಶ್, ಜನಜಾಗೃತಿ ಉಡುಪಿ ಪ್ರಾದೇಶಿಕ ವಿಭಾಗದ ಮೇಲ್ವಿಚಾರಕರಾದ ಶ್ರೀ ನಿತೇಶ್, ಆರೋಗ್ಯ ಸಹಾಯಕಿಯರಾದ ಶ್ರೀಮತಿ ಸೌಮ್ಯ, ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ನೇತ್ರಾವತಿ, ಕುಮಾರಿ ರಂಜಿತ ಇವರುಗಳು ಉಪಸ್ಥಿತರಿದ್ದರು.
