ಬೆಂಗಳೂರು ಪ್ರಾದೇಶಿಕ ವಿಭಾಗದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಜಿಲ್ಲೆಯ ಯಲಹಂಕ ಯೋಜನಾ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದಂತಹ ಶ್ರೀ ರಾಜಣ್ಣ ಕೊರವಿ, ಟ್ರಸ್ಟಿಗಳಾದ ವಿ.ರಾಮಸ್ವಾಮಿ ಭಾಗವಹಿಸಿ ಮಾಹಿತಿ ನೀಡಿದರು. ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ ಪಾಯಸ್ ರವರು 2023 -24ನೇ ಸಾಲಿನ ಕ್ರಿಯೆ ಯೋಜನೆಯ ಅನುಷ್ಠಾನದ ಮಾಹಿತಿಯನ್ನು ನೀಡಿದರು. ಜಿಲ್ಲಾಧ್ಯಕ್ಷರಾದ ಶ್ರೀ ಬಿ.ಕೆ ನಾರಾಯಣಸ್ವಾಮಿ ಅಧ್ಯಕ್ಷತೆಯನ್ನ ವಹಿಸಿದ್ದರು. ಆಡಳಿತ ಯೋಜನಾಧಿಕಾರಿ ಮೋಹನ್, ಯೋಜನಾಧಿಕಾರಿ ಜೈವಂತ ಪಟಗಾರ, ಜನಜಾಗೃತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
