ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಅಧ್ಯಕ್ಷರಾದ ಶ್ರೀಮತಿ ಶಾರದಾ ರೈ ಅವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಅಧ್ಯಕ್ಷರಾದ ಕಿಶೋರ್ ಹೆಗ್ಡೆ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾಹಿತಿ ನೀಡಿದರು. ತಾಲೂಕು ಯೋಜನಾಧಿಕಾರಿ ಶ್ರೀ ದಯಾನಂದರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮೇಲ್ವಿಚಾರಕರು ಅಚ್ಚುತ್ತ ರವರು ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
