ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಜನಜಾಗೃತಿ ವೇದಿಕೆಯ ಸಭೆ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಜನಜಾಗೃತಿ ವೇದಿಕೆಯ ಸಭೆಯನ್ನು ಜಿಲ್ಲಾಧ್ಯಕ್ಷರಾದ ಶ್ರೀ ಪದ್ಮನಾಭ ಶೆಟ್ಟಿ ಯವರು ಉದ್ಘಾಟಿಸಿದರು. ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿಗಳು / ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಕ್ರಿಯಾ ಯೋಜನೆಯನ್ನು ಮಂಡಿಸಿದರು. ತಾಲೂಕಿನ ಮಾಜಿ ಅಧ್ಯಕ್ಷರು, ನಿಕಟ ಪೂರ್ವ ಅಧ್ಯಕ್ಷರು, ನೂತನ ಅಧ್ಯಕ್ಷರು ಹಾಗೂ ಎಲ್ಲಾ ವಲಯದ ವಲಯ ಅಧ್ಯಕ್ಷರು ಮತ್ತು ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ, ತಾಲೂಕಿನ ಯೋಜನಾಧಿಕಾರಿಗಳು, ಶಿಬಿರಾಧಿಕಾರಿ ಮತ್ತು ವಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು. ಈ ಸಂದರ್ಭ ಮೇ 31 ವಿಶ್ವ ತಂಬಾಕು ವಿರೋಧಿ ದಿನಾಚರಣೆ, ಜೂನ್ 26 ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ, ಸ್ವಾಸ್ಥ ಕಾರ್ಯಕ್ರಮ, ಮದ್ಯವರ್ಜನ ಶಿಬಿರ, ಶೌರ್ಯ ಕಾರ್ಯಕ್ರಮ, ಗಿಡ ನಾಟಿ ಕಾರ್ಯಕ್ರಮ, ನವಜೀವನೋತ್ಸವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.