ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕಚೇರಿ ಧಾರವಾಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಧಾರವಾಡ, ಜಿಲ್ಲಾ ಜನಜಾಗೃತಿ ವೇದಿಕೆ ಧಾರವಾಡ ಇವರ ಸಂಯುಕ್ತ ಆಶಯದಲ್ಲಿ ತಂಬಾಕು ವಿರೋಧಿ ದಿನದ ಅಂಗವಾಗಿ ಕರಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪೂಜ್ಯರು ಸಂದೇಶ ನೀಡಿ ತಂಬಾಕು ಸೇವನೆಯು ವ್ಯಕ್ತಿಯ ಮಾನಸಿಕ, ಕೌಟುಂಬಿಕ , ಔದ್ಯೋಗಿಕ ಮಟ್ಟದಲ್ಲಿ ಪರಿಣಾಮವನ್ನು ಬೀರಿ ಮನುಷ್ಯನ ಅದಪತನಕ್ಕೆ ಕಾರಣವಾಗುತ್ತಿದೆ, ಈ ನೆಲೆಯಲ್ಲಿ ಪ್ರತಿ ಅಂಗಡಿಗಳಲ್ಲಿ ತಂಬಾಕಿನ ಸೇವನೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ವಾಗಬೇಕು, ಈ ಹಿನ್ನೆಲೆಯಲ್ಲಿ ಯೋಜನೆ ಮತ್ತು ಜನಜಾಗೃತಿ ವೇದಿಕೆ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಬಿಡುಗಡೆಗೊಳಿಸಿದ ಕರಪತ್ರಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ತಂಬಾಕು ಸೇವನೆ ಮಾಡುವ ವ್ಯಕ್ತಿಗಳಿಗೆ ತಲುಪಿಸುವ ಉತ್ತಮ ಕೆಲಸವಾಗಲಿ ಎಂದು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಧಾರವಾಡ ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲಿಯಾನ್, ಧಾರವಾಡ ಜಿಲ್ಲಾ ನಿರ್ದೇಶಕರಾದ ಪ್ರದೀಪ್ ಶೆಟ್ಟಿ, ಪೂಜ್ಯರ ಆಪ್ತ ಕಾರ್ಯದರ್ಶಿಗಳಾದ ವೀರು ಶೆಟ್ಟಿ, ಧಾರವಾಡದ ಆಪ್ತ ಕಾರ್ಯದರ್ಶಿಗಳಾದ ಜೀವನ್ದರ ಜೈನ್, ಯೋಜನಾಧಿಕಾರಿಗಳಾದ, ದೇವರಾಜ್, ಅಶೋಕ್, ಸುಧಾ, ಲೀಲಾ ಮೂರ್ತಿ, ಜನಜಾಗೃತಿ ಯೋಜನಾಧಿಕಾರಿಗಳಾದ ಭಾಸ್ಕರ್, ಧಾರವಾಡ ಜಿಲ್ಲೆಯ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
