ತುಮಕೂರು 2 ಜಿಲ್ಲೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಬೆಂಗಳೂರು ಪ್ರಾದೇಶಿಕ ಕಚೇರಿ ವ್ಯಾಪ್ತಿಯ ತುಮಕೂರು ಜಿಲ್ಲೆಯ ಎರಡರ ಜನಜಾಗೃತಿ ಜಿಲ್ಲಾ ವೇದಿಕೆಯ ಸಭೆ ನಡೆಯಿತು ಈ ಸಭೆಯ ಅಧ್ಯಕ್ಷತೆಯನ್ನು ಎಸ್‌ ಕೆ ರಾಮಚಂದ್ರ ಗುಪ್ತ ಯುವಹಿಸಿದ್ದು. ಶ್ರೀ ಪ್ರಕಾಶ್ ಜಿಲ್ಲಾ ವೇದಿಕೆ ಸದಸ್ಯರು ದೀಪ ಬೆಳಗಿಸಿ ಚಾಲನೆ ನೀಡಿದರು. ವೇದಿಕೆಯಲ್ಲಿ ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ ಇವರು ಜಿಲ್ಲೆಯಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ವಿಶೇಷ ಮುತುವರ್ಜಿ ವಹಿಸಿ ನಡೆಸುವಲ್ಲಿ ತಾವೆಲ್ಲರೂ ಸಹಕಾರ ನೀಡಬೇಕಾಗಿ ವಿನಂತಿಸಿದರು. ಮತ್ತು ಜಿಲ್ಲಾ ವ್ಯಾಪ್ತಿಯ ಎಲ್ಲ ಪದಾಧಿಕಾರಿಗಳು ಯೋಜನೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಜನಜಾಗೃತಿ ವೇದಿಕೆಯ ಮಧ್ಯವರ್ಜನ ಶಿಬಿರ. ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ. ಮತ್ತು ನವ ಜೀವನ ಸಮಿತಿ ಅನುಷ್ಠಾನ. ಮತ್ತು ಕ್ರಿಯಾಯೋಜನೆಯ ಅನುಷ್ಠಾನದ ಕುರಿತು ಸವಿಸ್ತಾರವಾದ ಚರ್ಚೆ ನಡೆಯಿತು. ಮತ್ತು ಈ ತಿಂಗಳಲ್ಲಿ ನಡೆಯಲಿರುವ ಮಧ್ಯವರ್ಜನ ಶಿಬಿರವನ್ನು ಯಶಸ್ವಿಯಾಗಿ ನಿರ್ವಹಿಸುವ ಕುರಿತು ತೀರ್ಮಾನಿಸಲಾಯಿತು. ಮತ್ತು ಜನಜಾಗೃತಿ ವೇದಿಕೆಯ ಮೂಲಕ ಜಿಲ್ಲಾ ವ್ಯಾಪ್ತಿಯಲ್ಲಿ ಯುವ ಜನತೆಗೆ ಜಾಗೃತಿ ಮೂಡಿಸುವಂಥ ಭಜನಾ ತರಬೇತಿ ನೀಡಿ ಭಜನಾ ಕಾರ್ಯಕ್ರಮದ ಮೂಲಕ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವ ಕುರಿತು ನಿರ್ಣಯಿಸಲಾಯಿತು ಮತ್ತು ಜಿಲ್ಲಾ ವೇದಿಕೆಗೆ ಹೆಚ್ಚು ಸದಸ್ಯರನ್ನು ಸೇರ್ಪಡೆಗೊಳಿಸಿ, ಜನಜಾಗೃತಿ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ನಡೆಸುವ ಕುರಿತು ತೀರ್ಮಾನಿಸಲಾಯಿತು.