ಪರಮಪೂಜ್ಯ ಡಾll ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾll ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ-2, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕೋಟೇಶ್ವರ ವಲಯ, ಕೋಟೇಶ್ವರ – ಬೀಜಾಡಿ – ಗೋಪಾಡಿ ಗ್ರಾಮ ಪಂಚಾಯತ್, ವಿಶ್ವಕರ್ಮ ಕಲ್ಯಾಣ ಮಂಟಪ ಕೋಟೇಶ್ವರ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೇಶ್ವರ, ನವಜೀವನ ಸಮಿತಿ ಕುಂದಾಪುರ ತಾಲೂಕು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಕೋಟೇಶ್ವರ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕುಂದಾಪುರ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಊರಿನ ಗಣ್ಯರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 1677ನೇ ಮದ್ಯವರ್ಜನ ಶಿಬಿರ ಕೋಟೇಶ್ವರದ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಬಿ. ಅಪ್ಪಣ್ಣ ಹೆಗ್ಡೆ ಆಡಳಿತ ಮೊಕ್ತೇಸರರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರು ಹಾಗೂ ಸ್ಥಾಪಕಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಕುಂದಾಪುರ ಇವರು ನೆರವೇರಿಸಿ ಉದ್ಘಾಟಕರ ಮಾತುಗಳನ್ನಾಡಿದರು. ಶ್ರೀ ರಾಜಗೋಪಾಲ ಆಚಾರ್ಯ ಅಧ್ಯಕ್ಷರು 1677ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕೋಟೇಶ್ವರ ಇವರು ಸಭಾಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ಶ್ರೀ ಗಣೇಶ್ ಆಚಾರ್ಯ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಉಡುಪಿ ಜಿಲ್ಲೆ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಶ್ರೀ ಶಿವರಾಯ ಪ್ರಭು ಇವರು ಮಾತನಾಡಿ ಸಂಸ್ಥೆಯ ಹುಟ್ಟು, ಬೆಳವಣಿಗೆ, ನಡೆದು ಬಂದ ದಾರಿ, ಅಭಿವೃದ್ಧಿಯ ಪಥ ಮತ್ತು ಸಾಧನೆಯ ಪರಿಚಯದೊಂದಿಗೆ ಶುಭಾಶಯವನ್ನು ಕೋರಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ನವೀನ್ ಚಂದ್ರ ಶೆಟ್ಟಿ ರಟ್ಟಾಡಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ, ಶ್ರೀ ಶ್ರೀನಿವಾಸ ಗಾಣಿಗ ವಲಯ ಅಧ್ಯಕ್ಷರು ಜನಜಾಗೃತಿ ವೇದಿಕೆ ಕೋಟೆಶ್ವರ, ಶ್ರೀಮತಿ ಸುಮತಿ ನಾಗರಾಜ್ ಅಧ್ಯಕ್ಷರು ಗ್ರಾಮ ಪಂಚಾಯಿತಿ ಬೀಜಾಡಿ, ಶ್ರೀಮತಿ ಶೋಭಾಚಂದ್ರ ಅಧ್ಯಕ್ಷರು ಕೇಂದ್ರ ಸಮಿತಿ ಕುಂದಾಪುರ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀ ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಮತ್ತು ಶ್ರೀಮತಿ ಜಯಲಕ್ಷ್ಮಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರು ಉಪಸ್ಥಿತರಿದ್ದರು. ತಾಲೂಕಿನ ಮೇಲ್ವಿಚಾರಕರು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಸೇವಾಪ್ರತಿನಿಧಿಗಳು ಕೋಟೇಶ್ವರ ವಲಯ, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಕೋಟೇಶ್ವರ ವಲಯ, ನವಜೀವನ ಸಮಿತಿ ಸದಸ್ಯರುಗಳು ಕುಂದಾಪುರ ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು, ಪತ್ರಿಕಾ ಮಾಧ್ಯಮದ ಮಿತ್ರರು ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘದ ಫಲಾನುಭವಿ ಸದಸ್ಯರುಗಳು ಇವರೆಲ್ಲರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಕಾರ್ಯಕ್ರಮವನ್ನು ಶ್ರೀ ನಾರಾಯಣ ಪಾಲನ್ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ-2 ತಾಲೂಕು ಇವರು ಸ್ವಾಗತಿಸಿ, ಶ್ರೀಮತಿ ವೇದಾವತಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕೋಟೇಶ್ವರ ವಲಯ ಇವರು ನಿರೂಪಿಸಿ, ಶ್ರೀಮತಿ ರಾಧಿಕಾ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ತೆಕ್ಕಟ್ಟೆ ವಲಯ ಇವರು ವಂದಿಸಿದರು.
