ಕೊಪ್ಪಳ ಪ್ರಾದೇಶಿಕ ವಿಭಾಗದ ಹೊಸಪೇಟೆ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಜಿಲ್ಲಾ ವೇದಿಕೆಯ ಅಧ್ಯಕ್ಷರಾದ ಶ್ರೀ ನಟರಾಜ್ ಬಾದಾಮಿ ,ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಸತೀಶ್ ಶೆಟ್ಟಿ ,ಉಪಾಧ್ಯಕ್ಷರದ ಶ್ರೀ ಪರಶುರಾಮ್ ಹಾಗೂ ಜಿಲ್ಲಾ ಜನಜಾಗೃತಿ ಪದಾಧಿಕಾರಿಗಳು ಹಾಗೂ ಕ್ಷೇತ್ರ & ಜನಜಾಗೃತಿ ಯೋಜನಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಿ ಈ ಕೆಳಗಿನಂತೆ ವಿಷಯಗಳ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. 2023/2024 ಸಾಲಿನ ಕ್ರಿಯಾ ಯೋಜನೆಯ ಅನುಷ್ಠಾನದ ಬಗ್ಗೆ, ಮೇ.31.. ವಿಶ್ವ ತಂಬಾಕು ವಿರೋಧಿ ದಿನಾಚರಣೆ, ಜೂನ್.26 ಮಾದಕ ವಸ್ತುಗಳ ವಿರೋಧಿ ದಿನಾಚರಣೆ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ( ತಾಲೂಕಿಗೆ 10 ಕಾರ್ಯಕ್ರಮದಂತೆ), ಮಧ್ಯವರ್ಜನ ಶಿಬಿರ, ಜಿಲ್ಲಾ ಮಟ್ಟದ ನವ ಜೀವನ ಪೋಷಕರ ಸಭೆ, ನವಜೀವನೋತ್ಸವ ಕಾರ್ಯಕ್ರಮ, ಪಾನಮುಕ್ತ ಸದಸ್ಯರಿಗೆ ಸ್ವ ಉದ್ಯೋಗ ತರಬೇತಿ, ವಲಯವಾರು ನವಜೀವನ ಸಮಿತಿ ರಚನೆ & ಬಲವರ್ಧನೆ, ಪಾನಮುಕ್ತ ಗ್ರಾಮ, ಪ್ರಾದೇಶಿಕ ಜನಜಾಗೃತಿ ವೇದಿಕೆಯ ಸಭೆ, ತರಬೇತಿದಾರರ ತರಬೇತಿ ಕಾರ್ಯಕ್ರಮ, ಕಾರ್ಯಕ್ರಮಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲಾಯಿತು.
