ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕು, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಪಡಂಗಡಿ ವಲಯ, ಜನಜಾಗೃತಿ ವೇದಿಕೆ ಪಡಂಗಡಿ ವಲಯ ಮತ್ತು ಸರಕಾರಿ ಪ್ರೌಢ ಶಾಲೆ ಪಡಂಗಡಿ ಇವರುಗಳು ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ” ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಗಣ್ಯರು ಸಾಂಕೇತಿಕವಾಗಿ ದೀಪವನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಶ್ರೀಮತಿ ಹೇಮಾವತಿ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಪಡಂಗಡಿ ವಲಯ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಶ್ರೀ ನಂದಕುಮಾರ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಾದಕ ವ್ಯಸನವೆಂಬುದೊಂದು ರೋಗ. ಆರೋಗ್ಯಪೂರ್ಣ ವ್ಯಕ್ತಿಗಳನ್ನು ಸಮಾಜಕ್ಕೆ ಕೊಡುವಲ್ಲಿ ನಮ್ಮೆಲ್ಲರ ಪಾತ್ರವಿದೆ. ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಹೇಳಿದರು. ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಅನ್ನಮ್ಮ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳೊಂದಿಗೆ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ರಿಚರ್ಡ್ ಗೋವಿಯಸ್ ಅಧ್ಯಕ್ಷರು ಜನಜಾಗೃತಿ ವೇದಿಕೆ ಪಡಂಗಡಿ ವಲಯ, ಶ್ರೀ ಕುಂಞಪ್ಪ ಅಧ್ಯಕ್ಷರು ಪಡಂಗಡಿ ಒಕ್ಕೂಟ ಇವರುಗಳು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. ಸಂಸ್ಥೆಯ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. 138 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಡಂಗಡಿ ಸೇವಾಪ್ರತಿನಿಧಿ ಶ್ರೀಮತಿ ರೇಷ್ಮಾ ಸ್ವಾಗತಿಸಿ, ನಿರೂಪಿಸಿ, ಶಾಲಾ ಶಿಕ್ಷಕಿಯಾದ ಶ್ರೀಮತಿ ಚೈತ್ರ ವಂದಿಸಿದರು.
