ಸಂಡೂರು ತಾಲೂಕಿನಲ್ಲಿ ಕೊಪ್ಪಳ ಪ್ರಾದೇಶಿಕ ವಿಭಾಗದ ಬಳ್ಳಾರಿ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು ಸಭೆಯನ್ನು ವೇದಿಕೆ ಅಧ್ಯಕ್ಷರಾದ ಶ್ರೀ ವಿರೂಪಾಕ್ಷ ಸರ್ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು ಉಪಾಧ್ಯಕ್ಷರಾದ ಶ್ರೀ ಭಾಸ್ಕರ್ ಸರ್ ಕಾರ್ಯದರ್ಶಿಗಳಾದ ಶ್ರೀ ರೋಹಿತಾಕ್ಷ ಸರ್ ಜನಜಾಗೃತಿಯ ಎಲ್ಲ ತಾಲೂಕಿನ ಸದಸ್ಯರು ಮತ್ತು ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. ಜನಜಾಗೃತಿ ಕಾರ್ಯಕ್ರಮಗಳು ಅನುಷ್ಠಾನದ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.
