ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಡಾ|ನವೀನ್ ಚಂದ್ರ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವೇದಿಕೆಯ ಕಾರ್ಯದರ್ಶಿಗಳಾದ ಶ್ರೀಮತಿ ಮಮತಾ ಹರೀಶ್ ರಾವ್ ನಿಕಟಪೂರ್ವ ಅಧ್ಯಕ್ಷರುಗಳು ಹಾಗೂ ಜಿಲ್ಲಾ ವ್ಯಾಪ್ತಿಯ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಕ್ಷೇತ್ರ ಯೋಜನಾಧಿಕಾರಿಗಳು, ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯಲ್ಲಿ ಈಗಾಗಲೇ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಯಶಸ್ವಿಯಾಗಿ ಸಾಗುತ್ತಿರುವ ಕುರಿತು ಹರ್ಷ ವ್ಯಕ್ತಪಡಿಸಿದರು. ಪ್ರಸ್ತುತ ಅಕ್ಟೋಬರ್ 2 ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಕ್ರಮಗಳ ಆಯೋಜನೆ ಅದಕ್ಕೆ ಬೇಕಾದ ಪೂರ್ವ ತಯಾರಿ, ಅದಕ್ಕೆ ನಿರ್ವಹಿಸಬೇಕಾದ ಜವಾಬ್ದಾರಿ, ಮುಂತಾದ ವಿಚಾರಗಳ ಕುರಿತು ಸಮಗ್ರವಾಗಿ ಚರ್ಚಿಸಿ ಯಶಸ್ವಿಯಾಗಿ ಕಾರ್ಯಕ್ರಮವನ್ನು ಪೂರ್ಣಗೊಳಿಸಲಾಯಿತು.
