1729ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು-1 ಜಿಲ್ಲೆಯ ತಿಪಟೂರು ಯೋಜನಾ ಕಛೇರಿ ವ್ಯಾಪ್ತಿಯ ಕಸಬಾ ವಲಯದ ಹಳೆಪಾಳ್ಯದ ಶ್ರೀ ಲಕ್ಷ್ಮೀ ರಂಗನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ 1729ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ಶೀನಪ್ಪ .ಎಂ ಸರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಸಮಗ್ರವಾಗಿ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಿದರು.ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ಬಿ.ಸಿ.ನಾಗೇಶ್ ರವರು,ತುಮಕೂರು -1 ಜಿಲ್ಲೆಯ ಮಾನ್ಯ ಹಿರಿಯ ಜಿಲ್ಲಾ ನಿರ್ದೇಶಕರಾದ ಶ್ರೀಮತಿ ದಯಾಶೀಲ ರವರು, ತಿಪಟೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಕೆ.ಷಡಾಕ್ಷರಿ ರವರು ಉಪಸ್ಥಿತರಿದ್ದರು.