ಬೆಂಗಳೂರು ಪ್ರಾದೇಶಿಕ ವಿಭಾಗದಲ್ಲಿ ಗಾಂಧೀ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಗಾಂಧಿ ಸ್ಮೃತಿ, ಜನಜಾಗೃತಿ ಜಾಥಾ ಹಾಗೂ ವ್ಯಸನ ಮುಕ್ತರ ಸಾಧನ ಸಮಾವೇಶ ಕಾರ್ಯಕ್ರಮ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು-2 ಜಿಲ್ಲಾ ಕಛೇರಿ ವ್ಯಾಪ್ತಿಯ ಪಾವಗಡ ಯೋಜನಾ ಕಛೇರಿ ವ್ಯಾಪ್ತಿಯ ಸಾಯಿರಾಂ ಮಂದಿರ, ಪಾವಗಡ ದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಪಾವಗಡ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತುಮಕೂರು -2 ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ರಾಷ್ಟಪಿತ ಮಹಾತ್ಮಾಗಾಂಧೀಜಿಯವರ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ. ಗಾಂಧಿ ಸ್ಮೃತಿ, ಜನಜಾಗೃತಿ ಜಾಥಾ ಹಾಗೂ ವ್ಯಸನ ಮುಕ್ತರ ಸಾಧನ ಸಮಾವೇಶ ಕಾರ್ಯಕ್ರಮವನ್ನು ವೇದಿಕೆಯಲ್ಲಿದ್ದಂತಹ ಗಣ್ಯ ಮಾನ್ಯರು ಉದ್ಗಾಟನೆ ಮಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ತುಮಕೂರು-2 ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀಯುತ ದಿನೇಶ್.ಡಿ ಸರ್ ಹಾಗೂ ಶ್ರೀ ಚೆನ್ನಬಸವಣ್ಣ ಉಪಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು-2 ಜಿಲ್ಲೆ ಶ್ರೀ ಗುರುನಾಥ್ PSI ಪಾವಗಡ ಶ್ರೀ ರಾಮರೆಡ್ಡಿ ಸಂಪನ್ಮೂಲ ವ್ಯಕ್ತಿಗಳು ಪಾವಗಡ. ಶ್ರೀ ಸಣ್ಣನಾಗಪ್ಪ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು -2 ಜಿಲ್ಲೆ. ಶ್ರೀ ರಾಜಗೋಪಾಲ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು-2 ಜಿಲ್ಲೆ. ಶ್ರೀಮತಿ ರತ್ನಮ್ಮ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು -2 ಜಿಲ್ಲೆ. ಶ್ರೀ ನಾಗಭೂಷಣ್ ರೆಡ್ಡಿ ರಾಷ್ಟ್ರೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಹಾರೈಸಿದರು. ಶ್ರೀ ಜಿ.ಸುದರ್ಶನ್ ಕುಮಾರ್. ಅಧ್ಯಕ್ಷರು ಕನ್ನಿಕಾ ಪರಮೇಶ್ವರಿ ದೇವಸ್ಥಾನ ಅಭಿವೃದ್ಧಿ ಸಮಿತಿ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.